ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಶೇ.65.68 ರಷ್ಟು ಮತದಾನವಾದರೆ, ದಾವಣಗೆರೆ ಕ್ಷೇತ್ರದಲ್ಲಿ ಶೇಕಡಾ.63.04 ರಷ್ಟು ಮತದಾನವಾಗಿದೆ.
ಸಂಜೆ 6 ಗಂಟೆಯವರೆಗೆ ಮತದಾನ ನಡೆದಿದ್ದು, ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಎರಡೂ ಕ್ಷೇತ್ರಗಳಲ್ಲೂ ಜಿದ್ದಾಜಿದ್ದಿನ ಪೈಪೋಟಿ ಇದ್ದು, ಮೇ.4ರಂದು ಫಲಿತಾಂಶ ಪ್ರಕಟವಾಗಲಿದೆ.





