ರಾಜ್ಯ

ವೃಕ್ಷಮಾತೆ ನಿಧನ | ಸಿಎಂ ಸೇರಿ ಗಣ್ಯರ ಸಂತಾಪ ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಇಂದು(ನ.14)ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ತಿಮ್ಮಕ್ಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್‌, ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇನ್ನೂ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ತಿಳಿಸಿದರು.

ಇದನ್ನು ಓದಿ: ಸಾಲುಮರದ ತಿಮ್ಮಕ್ಕ ಇನ್ನಿಲ್ಲ

114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಹುಟ್ಟೂರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮ ಜನಿಸಿದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತಿದೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ , ಕೇಂದ್ರಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದರು.

ತಿಮ್ಮಕ್ಕ ಅವರ ಕೊನೆ ಆಸೆ: ಪರಿಶೀಲಿಸಿ ಕ್ರಮ
ತಿಮ್ಮಕ್ಕ ಅವರ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಿ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೊಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಹೇಳಿದರು.

ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

2 mins ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

10 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

10 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

11 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

12 hours ago