ಬೆಂಗಳೂರು: ಬಿಜೆಪಿ ಆಡಳಿತದ ಸಮಯದಲ್ಲೇ ರೈತರಿಗೆ ಹೆಚ್ಚು ಹೆಚ್ಚು ವಕ್ಫ್ ನೋಟಿಸ್ ಹೋಗಿದೆ. ಈ ಮೂಲಕ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಆಪಾದನೆಗಳು ಬಯಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಆರೋಪಿಸಿದ್ದಾರೆ.
ವಕ್ಫ್ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ನಮ್ಮ ಅವಧಿಯಲ್ಲಿ ರೈತರಿಗೆ ಹೆಚ್ಚು ವಕ್ಫ್ ನೋಟಿಸ್ ಕೊಟ್ಟಿದ್ದಾರೆ ಎಂದು ಬಿಜೆಪಿಯವರು ಪದೇ ಪದೇ ಆರೋಪ ಮಾಡುತ್ತಿದ್ದರು. ಆದರೆ ಈಗ ಸತ್ಯ ಏನು ಅಂತ ಎಲ್ಲರಿಗೂ ಗೊತ್ತಾಗಿದೆ. ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲೇ ರೈತರಿಗೆ ಹೆಚ್ಚು ನೋಟಿಸ್ ನೀಡಲಾಗಿದೆ. ಇದಕ್ಕೆ ಬಿಜೆಪಿಯವರು ಏನು ಹೇಳುತ್ತಾರೆ ಎಂದು ಪ್ರಶ್ನೆ ಮಾಡಿದರು.
ಮಾಜಿ ಶಾಸಕ ಕುಮಾರ ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸುಮಾರು 2900 ಎಕರೆಗೆ ನೋಟಿಸ್ ನೀಡಿದ್ದಾರೆ. ನಮ್ಮ ಅವಧಿಯಲ್ಲಿ ಕೇವಲ 300 ಎಕರೆಗೆ ಮಾತ್ರ ನೋಟಿಸ್ ನೀಡಲಾಗಿದೆ. ಈಗಲಾದರೂ ಯಾರ ಮೇಲೆ ಆಪಾದನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಇನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ವಕ್ಫ್ ವಿಚಾರ ಇಟ್ಟುಕೊಂಡು ರಾಜ್ಯಾದ್ಯಂತ ಹೋರಾಟ ಮಾಡಲು ಹೊರಟಿದ್ದಾರೆ. ಅವರ ಪಕ್ಷದ ಅವಧಿಯಲ್ಲಿಯೇ ಹೆಚ್ಚು ನೋಟಿಸ್ ವಿಷಯ ಗೊತ್ತಾಗಿಯೇ ಯತ್ನಾಳ್ ಅವರು ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಿಗೆ ಮುಜುಗರ ಮಾಡಲು ಹೋರಾಟಕ್ಕೆ ಸಿದ್ಧರಾಗಿದ್ದಾರೆ ಎಂದು ಲೇವಡಿ ಮಾಡಿದರು.
ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು…
ಕೊಡಗು ಜಿಲ್ಲೆಯಲ್ಲಿಯೂ ಕಾಣಿಸಿಕೊಳ್ಳುತ್ತಿರುವ ರೋಗ; ಹತೋಟಿಗೆ ಔಷಧಿ ಜೊತೆಗೆ ಸೂಕ್ತ ಪರಿಹಾರಕ್ಕೆ ಒತ್ತಾಯ ಮಡಿಕೇರಿ: ವಾಣಿಜ್ಯ ಬೆಳೆಯಾಗಿ ಕೃಷಿಕರ ಬದುಕಿಗೆ ಆಶ್ರಯವಾಗಿರುವ…
ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…