ಮಂಡ್ಯ: ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಾಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಮಾಜಿ ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿ ಇಂದು(ನ.22) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿವಾದ ಗಂಭೀರ ವಿಷಯವಾಗಿದ್ದು, ರೈತರ ಜಮೀನನ್ನು ವಶಪಡಿಸಿಕೊಂಡು ಅನ್ಯಾಯವಾಗುವಂತೆ ಮಾಡಿದೆ. ವಕ್ಫ್ ಮಂಡಳಿಯ ಬಗ್ಗೆ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಬಿಜೆಪಿ ಪಕ್ಷ ಮಾಡುತ್ತಿದೆ. ಈ ವಿಚಾರ ಯಾವುದೋ ಪಕ್ಷಕ್ಕೋ ಅಥವಾ ವ್ಯಕ್ತಿಗೋ ಸಂಬಂಧಿಸಿದಲ್ಲ. ಹೀಗಾಗಿ ಈಗ ಇದನ್ನು ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ಉಲ್ಬಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ವಕ್ಫ್ ಆಸ್ತಿ ವಿಚಾರದಲ್ಲಿ ರೈತರಿಗೆ ಕೊಟ್ಟು ಕಿತ್ತುಕೊಳ್ಳುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ರೈತರಿಗೆ ನೋಟಿಸ್ ಕಳುಹಿಸಿ ವಾಪಾಸ್ ತೆಗೆದುಕೊಳ್ಳುತ್ತಾರೆ ಎಂದರೆ ಏನು ಅರ್ಥ? ಸರ್ಕಾರದ ಈ ಉದ್ದೇಶವನ್ನು ಜನತೆ ಅರ್ಥ ಮಾಡಿಕೊಳ್ಳಬೇಕು. ರಾಜ್ಯ ಸರ್ಕಾರದ ಈ ನಡವಳಿಕೆ ಖಂಡನೀಯವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…