Mysore
23
broken clouds

Social Media

ಶುಕ್ರವಾರ, 18 ಸೆಪ್ಟೆಂಬರ್ 2026
Light
Dark

ಕಾವೇರಿ,ಕಬಿನಿ ನದಿಗೆ ತ್ಯಾಜ್ಯ : 11 ಸ್ಥಳೀಯ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ಬೆಳಗಾವಿ : ಕಾವೇರಿ, ಕಬಿನಿ, ಅರ್ಕಾವತಿ, ತುಂಗಭದ್ರಾ, ಭದ್ರಾ ಸೇರಿದಂತೆ ವಿವಿಧ ನದಿಗಳಿಗೆ ಸಂಸ್ಕರಿಸದ ಗೃಹ ತ್ಯಾಜ್ಯ ಜಲ ಹರಿಯುತ್ತಿದ್ದು, ನದಿ ದಂಡೆಯ 11 ನಗರ ಮತ್ತು ಪುರಸಭೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನಗರಸಭೆ ಮತ್ತು ಪುರಸಭೆಗಳ ವಿರುದ್ಧ ಈ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದ್ದು, ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣಾ ಹಂತದಲ್ಲಿದೆ ಎಂದು ತಿಳಿಸಿದರು.

Tags:
error: Content is protected !!