Mysore
16
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಬೆಂಗಳೂರಲ್ಲಿ ನೀರನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್‌

ಬೆಂಗಳೂರು: ನಗರದಲ್ಲಿ ನೀರಿನ ದರ ಏರಿಕೆ ಆನಿವಾರ್ಯವಾಗಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರು ಸರಿ ದರ ಹೆಚ್ಚಳವಾಗುತ್ತದೆ. ಎಷ್ಟು ಏರಿಕೆ ಮಾಡಬೇಕೆಂದು ಇನ್ನೂ ನಿರ್ಧರಿಸಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಇಂದು(ಆ.22) ಯುನೈಟೆಡ್ ನೇಷನ್ಸ್ ಇನೋವೇಷನ್ಸ್ ಪ್ರಾಜೆಕ್ಟ್‌ ಫಾ‌ರ್ ವಾಟ‌ರ್ ಸೆಕ್ಯೂರಿಟಿ ಇನ್ ಬೆಂಗಳೂರು ಯೋಜನೆ ಹಾಗೂ ಮಳೆನೀರು ಕೊಯ್ಲು ಜಾಗೃತಿ ಅಭಿಯಾನ, ವರುಣಮಿತ್ರ ತರಬೇತಿ ಕಾರ್ಯಕ್ರಮ ಮತ್ತು 110 ಹಳ್ಳಿಗಳಿಗೆ ಕಾವೇರಿ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬೆಂಗಳೂರಿನ 1.40ಕೋಟಿ ಜನರಿಗೆ ನೀರನ್ನು ಒದಗಿಸಲೇಬೇಕು. ಇದಕ್ಕಾಗಿ ಸಾಲ ಮಾಡಿ ಸಂಪರ್ಕ ಜಾಲವನ್ನು ಹೆಚ್ಚಿಸದೆ ಹೊರತು ನೀರು ಪೂರೈಕೆ ಕಷ್ಟವಾಗುತ್ತದೆ. ದರ ಹೆಚ್ಚಿಸದಿದ್ದರೆ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ. ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್‌ ಬಿಲ್‌ ಕಟ್ಟಲು ಆಗುತ್ತಿಲ್ಲ ಎಂದು ತಿಳಿಸಿದರು.

ನೀರು ಮತ್ತು ಇಂಧನ ಈ ಎರಡು ಪ್ರಮುಖವಾದ ಇಲಾಖೆಗಳು. ಎರಡು ಇಲಾಖೆಯನ್ನು ನಾನು ನೋಡ್ತಾ ಇದ್ದೇನೆ. ಹಿಂದೆ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ನೀರು ಸರಬರಾಜನ್ನು ಖಾಸಗೀಕರಣ ಮಾಡುವ ಚರ್ಚೆ ನಡೆದಿತ್ತು. ಅದರ ಬಗ್ಗೆ ಫ್ರಾನ್ಸ್ ಹೋಗಿ ನೋಡಿಕೊಂಡು ಬಂದೆ. ನೋಡಿ ಬಂದು ನಮ್ಮ ರಾಜ್ಯದಲ್ಲಿ ಇದು ಕಷ್ಟವಾಗುತ್ತೆ ಎಂದು ಮಾಹಿತಿ ‌ನೀಡಿದೆ. ಸಾಕಷ್ಟು ವಿರೋಧ ವ್ಯಕ್ತವಾಯ್ತು ಆನಂತರ ಕೈ ಬಿಟ್ಟೆವು. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಿದ್ದು, ನೀರಿನ ಬಳಕೆಯೂ ಹೆಚ್ಚಾಗಿದೆ. ಮೇಕೆದಾಟು ಯೋಜನೆ ಬಗ್ಗೆ ನನಗೆ ಭರವಸೆ ಇದೆ‌. ಆದಷ್ಟು ಬೇಗ ಅದನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು.

ನೀರಾವರಿ ಯೋಜನೆಯಲ್ಲಿ ಹೊಸ ಬಿಲ್ ತಂದಿದ್ದೇವೆ. ನೀರಿನ ಕಾಲುವೆಗಳ ಅಕ್ಕಪಕ್ಕ ಅರ್ಧ ಕಿಲೋ ಮೀಟರ್ ಯಾರು ಬೋರ್ ವೆಲ್ ಹಾಕುವಂತಿಲ್ಲ. ಯಾರು ಕಾಲುವೆಗಳಿಂದ ನೇರವಾಗಿ ನೀರು ಟ್ಯಾಪ್ ಮಾಡುವಂತಿಲ್ಲ. ಹೊಸ ಕಾನೂನು ಬಂದಿದೆ. ರಾಜ್ಯಪಾಲರು ಇದಕ್ಕೆ ಸಹಿ ಹಾಕಿದ್ದಾರೆ. ಬೆಂಗಳೂರಿನ ಜನರಿಗೆ ನೀರು ಪೂರೈಸಲು ನಾವು ಬದ್ಧರಾಗಿದ್ದು, ಅದಕ್ಕೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

Tags:
error: Content is protected !!