ಚಿಕ್ಕಮಗಳೂರು: ಎಲ್ಲಾ ದರ ಏರಿಕೆಯಾಗಿದೆ. ಗಾಳಿಯೊಂದಕ್ಕೆ ಟ್ಯಾಕ್ಸ್ ಹಾಕಿದ್ರೆ ಇವರೆಲ್ಲಾ ಔರಂಗಜೇಬನ ಅಪ್ಪಂದಿರು ಅಂತ ತೋರಿಸೋಕೆ ಬೇರೆ ಏನೂ ಬೇಡ ಎಂದು ಸಿ.ಟಿ.ರವಿ ಲೇವಡಿ ಮಾಡಿದ್ದಾರೆ.
ನೀರಿನ ಕಂದಾಯ ಜಾಸ್ತಿ ಮಾಡೇ ಮಾಡ್ತೀವಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಎಲ್ಲಾ ದರ ಏರಿಕೆ ಆಗಿದೆ. ಗಾಳಿ ಏಕೆ ಬಿಟ್ಟಿದ್ದೀರಾ, ಅದನ್ನು ಏರಿಸಿಬಿಡಿ. ಗಾಳಿಯೊಂದಕ್ಕೆ ಟ್ಯಾಕ್ಸ್ ಹಾಕಿದ್ರೆ ಔರಂಗಜೇಬನ ಅಪ್ಪಂದಿರು ಅಂತ ತೋರ್ಸಕ್ಕೆ ಬೇರೇನೂ ಬೇಡ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಡಿಕೆಶಿಯವರೇ ಜನವಿರೋಧಿ ಆಡಳಿತಕ್ಕೆ ಆಯಸ್ಸು ಕಮ್ಮಿ. ಮುಂದಿನ ಬಾರಿ ಜನ ಬುದ್ದಿ ಕಲಿಸುವುದಕ್ಕೆ ಈಗಾಗಲೇ ತೀರ್ಮಾನ ಮಾಡಿದ್ದಾರೆ ಎಂದರು.
ಒಂದೆಡೆ ಗ್ಯಾರಂಟಿ ಕೊಟ್ಟು ಮತ್ತೊಂದೆಡೆ ಎಲ್ಲರ ಜೇಬಿಗೂ ಪಿಕ್ ಪಾಕೆಟ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಜನರಿಗೆ 2000ರೂ ಕೊಟ್ಟು 20 ಸಾವಿರ ರೂ ಹೊಡೆಯುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.
ಇನ್ನು ಮುಡಾ ಹಗರಣದ ಬಗ್ಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಮುಡಾ ಹಗರಣದ ಬಗ್ಗೆ ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಚರ್ಚೆಗೆ ಪ್ರಯತ್ನ ಮಾಡಿದ್ದೇವೆ. ಎಲ್ಲಾ ಗೊತ್ತಿದ್ದ ಸಿಎಂ ಸಿದ್ದರಾಮಯ್ಯ ಅದಕ್ಕೆ ಅವಕಾಶ ನೀಡದೇ ಪಲಾಯನ ಮಾಡಿದರು. ಎಲ್ಲಾ ಸತ್ಯ ಹೊರಬರುತ್ತದೆ ಎಂದು ನಮಗೆ ಚರ್ಚೆಗೆ ಅವಕಾಶ ನೀಡಲಿಲ್ಲ ಎಂದು ಕಿಡಿಕಾರಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…