ರಾಜ್ಯ

ವಯನಾಡು ಭೂ ಕುಸಿತ ದುರಂತದಲ್ಲಿ 200 ದಾಟಿದ ಸಾವಿನ ಸಂಖ್ಯೆ

ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 200ಕ್ಕೆ ದಾಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಇದುವರೆಗೆ 225 ಜನರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿರಾರು ಜನರನ್ನು ರಕ್ಷಣೆ ಮಾಡಲಾಗಿದ್ದು, ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.

ನೂರಾರು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಉಳಿದಿರುವವರ ರಕ್ಷಣೆಗಾಗಿ ರಕ್ಷಣಾ ತಂಡಗಳು ಕಾರ್ಯಾಚರಣೆಯನ್ನು ಆರಂಭಿಸಿವೆ.

ಭಾರತೀಯ ಸೇನೆ, ನೌಕಾಪಡೆ ಮತ್ತು ಎನ್‌ಡಿಆರ್‌ಎಫ್‌ ಸಿಬ್ಬಂದಿ ಭೂಕುಸಿತದಿಂದ ಬದುಕುಳಿದವರಿಗಾಗಿ ಕುಸಿದ ಮೇಲ್ಛಾವಣಿ ಮತ್ತು ಅವಶೇಷಗಳಡಿಯಲ್ಲಿ ಹುಡುಕುತ್ತಿದ್ದಾರೆ.

ಭೂಕುಸಿತದಿಂದ ನೆಲಸಮವಾದ ಮುಂಡಕ್ಕೈ ಕುಗ್ರಾಮದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಮನೆಗಳ ಒಳಗೆ ಕುಳಿತಿರುವ ಮತ್ತು ಮಲಗಿರುವ ಸ್ಥಿತಿಯಲ್ಲಿ ಮೃತದೇಹಗಳ ಭಯಾನಕ ದೃಶ್ಯ ಕಂಡುಬರುತ್ತಿವೆ.

ಅವಶೇಷಗಳಡಿ ಇನ್ನೂ ಹಲವಾರು ಜನರು ಸಿಲುಕಿದ್ದು, ಸಾವು-ನೋವಿನ ಪ್ರಮಾಣ ಹೆಚ್ಚಾಗುವ ಆತಂಕವಿದೆ.

ಬಹುತೇಕ ಎಲ್ಲರು ನಿದ್ದೆ ಮಾಡುತ್ತಿರುವಾಗ ಮಧ್ಯರಾತ್ರಿ 1.30 ರಿಂದ 4 ಗಂಟೆಯ ನಡುವೆ ಭೂಕುಸಿತ ಸಂಭವಿಸಿದ್ದು, ಬೃಹತ್‌ ಬಂಡೆಗಳು ಮತ್ತು ಬೇರು ಸಹಿತ ಮರಗಳು ಮುಂಡಕ್ಕೈನಿಂದ ಚೂರಲ್ಮಲಾಗೆ ನುಗ್ಗಿ ತೀವ್ರ ಹಾನಿಯನ್ನುಂಟುಮಾಡಿವೆ.

ಈ ದುರಂತವು 2018ರ ಪ್ರವಾಹದ ನಂತರ ಕೇರಳದಲ್ಲಿ ಸಂಭವಿಸಿದ ಅತ್ಯಂತ ವಿನಾಶಕಾರಿ ಘಟನೆಯಾಗಿದೆ. ಈ ದುರಂತದಲ್ಲಿ ಸಾವಿನ ಸಂಖ್ಯೆ 500 ದಾಟಬಹುದು ಎಂದು ಅಂದಾಜಿಸಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

5 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

5 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

6 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

6 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

8 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

8 hours ago