ವಯನಾಡು: ವಯನಾಡು ಭೂಕುಸಿತ ವಿಷಯ ತಿಳಿದು ಬಹಳ ನೋವಾಯಿತು. ಕೇರಳ ನನಗೆ ಬಹಳ ಪ್ರೀತಿ ನೀಡಿದೆ. ಆದ್ದರಿಂದ ಭೂಕುಸಿತ ಸಂತ್ರಸ್ತರ ಪುನರ್ ವಸತಿಗಾಗಿ ಕೇರಳ ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂ ದೇಣಿಗೆ ನೀಡಿದ್ದೇನೆ ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.
ವಯನಾಡು ಭೂಕುಸಿತ ದುರಂತದಲ್ಲಿ 350ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. ದುರಂತದಲ್ಲಿ ಇನ್ನೂ ಹೆಚ್ಚಿನ ಜನರು ಭೂಮಿಯಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ದುರಂತದಲ್ಲಿ ಸಂತ್ರಸ್ತರ ಗೋಳು ಹೇಳತೀರದಾಗಿದ್ದು, ಸ್ಟಾರ್ ನಟ-ನಟಿಯರು ಸಂತಸ್ತರಿಗೆ ದೇಣಿಗೆ ನೀಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ, ಮೋಹನ್ ಲಾಲ್, ಸೂರ್ಯ, ಜ್ಯೋತಿಕಾ, ಕಾರ್ತಿಕ್, ವಿಕ್ರಮ್ ಸೇರಿದಂತೆ ಅನೇಕ ಕಲಾವಿದರು ಕೇರಳಕ್ಕೆ ದೇಣಿಗೆ ನೀಡಿದ್ದಾರೆ.
ಈಗ ಸ್ಟಾರ್ ನಟ ಅಲ್ಲು ಅರ್ಜುನ್ ಕೂಡ ಕೇರಳಕ್ಕೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಕೇರಳ ಸಿಎಂ ಪರಿಹಾರ ನಿಧಿಗೆ ಅಲ್ಲು ಅರ್ಜುನ್ ಹಣ ನೀಡಿದ್ದಾರೆ. ಅಲ್ಲು ಅರ್ಜುನ್ ನೀಡಿರುವ 25 ಲಕ್ಷ ರೂಪಾಯಿ ದೇಣಿಗೆಯಿಂದ ವಿವಿಧ ರೀತಿಯ ಸೌಕರ್ಯಗಳನ್ನು ನೀಡಲು ಸಹಾಯ ಆಗುತ್ತದೆ. ಔಷಧಿ, ಆಹಾರ, ಬಟ್ಟೆ ಮುಂತಾದ ವಸ್ತುಗಳನ್ನು ನೀಡಲು ಈ ಹಣ ತುಂಬಾ ಸಹಕಾರಿಯಾಗಲಿದೆ.





