ವಯನಾಡು: ದೇವರನಾಡು ಕೇರಳ ಈಗ ಮರಣ ದಿಬ್ಬವಾಗಿದ್ದು, ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ.
ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಸಾವಿನ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಈವರೆಗೂ 300ಕ್ಕೂ ಹೆಚ್ಚು ಮಂದಿ ಬಲಿ ಆಗಿದ್ದು, 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಇನ್ನೂ 240 ಮಂದಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ. ಅವಶೇಷಗಳಡಿ ಸಿಲುಕಿರುವವರ ಪತ್ತೆಗೆ ಸೇನೆ ಹಾಗೂ ಎನ್‌ಡಿಆರ್‌ಎಫ್ ತಂಡ ಅವಿರತವಾಗಿ ಶ್ರಮಿಸುತ್ತಿವೆ.
ಕಾರ್ಯಾಚರಣೆಯಲ್ಲಿ 10ಕ್ಕೂ ಹೆಚ್ಚು ಜೆಸಿಬಿಗಳನ್ನು ಬಳಸಲಾಗಿದ್ದು, ಮಣ್ಣು-ಕಲ್ಲುಗಳನ್ನು ತೆರವು ಮಾಡಲಾಗುತ್ತಿದೆ. ಸ್ಥಳದಲ್ಲಿ ಶ್ವಾನಗಳನ್ನು ಬಳಸಿ ಶೋಧ ಕಾರ್ಯ ನಡೆಯುತ್ತಿದ್ದು, ಜೆಸಿಬಿಯನ್ನು ಸಹ ನದಿಗೂ ಸಹ ಇಳಿಸಲಾಗಿದೆ. ಚಲಿಯಾರ್ ನದಿ ಪ್ರತಾಪ ಕೊಂಚ ಕಡಿಮೆಯಾಗಿದ್ದು, ತಾತ್ಕಾಲಿಕ ಸೇತುವೆ ಬಳಕೆಗೆ ಲಭ್ಯವಾಗಿದೆ.
ಈ ಕಾರ್ಯಾಚರಣೆ ಇನ್ನೂ 15 ದಿನಗಳ ಕಾಲ ಮುಂದುವರಿಯಲಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸಾವಿನ ಸಂಖ್ಯೆ 500 ದಾಟಬಹುದು ಎಂದು ಅಂದಾಜಿಸಲಾಗಿದೆ.
ಇನ್ನು ದುರಂತ ಸ್ಥಳಕ್ಕೆ ಇಂದು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೇರಳ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಅನೇಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆಯಲ್ಲಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಇನ್ನು ಶವಗಳನ್ನು ಕುಟುಂಬಸ್ಥರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತಿದ್ದು, ಶವಗಳ ಮುಂದೆ ಕುಟುಂಬದವರ ರೋಧನೆ ಹೇಳತೀರದಾಗಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…