ತಿರುವನಂತಪುರಂ: ಈಗಷ್ಟೇ ತಾನೇ ಭೂಕುಸಿತದ ಕರಾಳ ಭೀಕರತೆಯನ್ನು ಅನುಭವಿಸಿದ ವಯನಾಡಿಗೆ ಈಗ ಮತ್ತೊಂದು ಆತಂಕ ಎದುರಾಗಿದೆ. ನಿನ್ನೆ ವಯನಾಡಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.
ಭೂಕುಸಿತ ಸಂಭವಿಸಿದ ಚೂರಲ್ಮಲಾ-ಮುಂಡಕ್ಕೈ ಪ್ರದೇಶಗಳಿಂದ ಸುಮಾರು 15 ರಿಂದ 20 ಕಿಲೋ ಮೀಟರ್ ದೂರದಲ್ಲಿರುವ ಅಂಬಲವಾಯಲ್-ಎಡಕಲ್ ಪ್ರದೇಶಗಳಲ್ಲಿ ನಿನ್ನೆ ಗುಡುಗು ಸದ್ದು ಕೇಳಿಸಿದೆ ಎನ್ನಲಾಗಿದೆ.
ಹತ್ತಿರದ ಕೋಝಿಕ್ಕೋಡ್ ಮತ್ತು ಫಾಲಕ್ಕಾಡ್ ಜಿಲ್ಲೆಗಳ ಭಾಗಗಳಿಂದ ಇದೇ ರೀತಿಯ ಶಬ್ದಗಳು ಕೇಳಿಬಂದಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಶಬ್ದ ಕೇಳಿ ಅಂಬಲವಾಯಲ್-ಎಡಕಲ್ ಭಾಗದ ಜನರು ಮನೆಯಿಂದ ಹೊರ ಬಂದಿದ್ದು, ಭಯಭೀತರಾಗಿದ್ದಾರೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಪರಿಹಾರ ಶಿಬಿರದಲ್ಲಿ ಹಲವು ಕುಟುಂಬಗಳು ಆಶ್ರಯ ಪಡೆದಿದೆ.
ಶಬ್ಧ ಬಂದ ಕೂಡಲೇ ಹಲವು ಮನೆಯ ಕಿಟಕಿಗಳ ಗಾಜುಗಳು ಒಡೆದು ಹೋಗಿರುವ ಅನುಭವವಾಗಿದೆ. ಭೂಕುಸಿತದ ತೀವ್ರತೆಯನ್ನು ಮೌಲ್ಯಮಾಪನ ಮಾಡಲು ಕೇಂದ್ರದ ತಜ್ಞರ ತಂಡ ಈಗಾಗಲೇ ವಯನಾಡು ಪ್ರದೇಶಕ್ಕೆ ಭೇಟಿ ನೀಡಿದೆ.
ವರದಿ ಬಂದ ಬಳಿಕವಷ್ಟೇ ಇದು ಭೂಕಂಪನವ, ಇಲ್ಲ ಪ್ರಕೃತಿಯ ವಿಸ್ಮಯವೇ ಎಂಬುದು ತಿಳಿದು ಬರಲಿದೆ.
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…
ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…