ರಾಜ್ಯ

ಭೂಕುಸಿತದ ಬಗ್ಗೆ ಯಾವುದೇ ರೀತಿಯ ಮುನ್ನೆಚ್ಚರಿಕೆ ನೀಡಿರಲಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್‌

ತಿರುವನಂತಪುರಂ: ವಯನಾಡು ಭೂಕುಸಿತದ ಬಗ್ಗೆ ಎಚ್ಚರಿಕೆ ನೀಡಿದರೂ ಕೇರಳ ಕ್ರಮ ಕೈಗೊಂಡಿಲ್ಲ ಎಂಬ ಅಮಿತ್‌ ಶಾ ಹೇಳಿಕೆಯನ್ನು ಕೇರಳ ಸಿಎಂ ಪಿಣರಾಯಿ ವಿಜಯನ್‌ ತಿರಸ್ಕರಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೇಂದ್ರ ಸರ್ಕಾರದಿಂದ ಭೂಕುಸಿತದ ಬಗ್ಗೆ ಯಾವುದೇ ಮುನ್ನೆಚ್ಚರಿಕೆ ಬಂದಿರಲಿಲ್ಲ. ಕೇಂದ್ರ ಸಚಿವ ಅಮಿತ್‌ ಶಾ ಹೇಳಿರುವುದು ಶುದ್ಧ ಸುಳ್ಳು. ಈ ಸಂದರ್ಭದಲ್ಲಿ ಸಂತ್ರಸ್ತರ ನೆರವಿಗೆ ಮುಂದಾಗಬೇಕು. ಇದು ಒಬ್ಬೊರನ್ನೊಬ್ಬರು ದೂಷಿಸುವ ಸಮಯವಲ್ಲ. ವಾಸ್ತವಾಂಶ ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ದುರಂತ ಪೀಡಿತ ಪ್ರದೇಶಗಳಲ್ಲಿ ಆರೆಜ್‌ ಅಲರ್ಟ್‌ ಘೋಷಿಸಲಾಗಿದೆ. ಕೇಂದ್ರ ಜಲ ಆಯೋಗವು ಜುಲೈ 23- 29ರ ಅವಧಿಯಲ್ಲಿ ಇರುವಂಜಿಪುಳ ಅಥವಾ ಚಾಲಿಯಾರ್‌ನಲ್ಲಿ ಪ್ರವಾಹದ ಎಚ್ಚರಿಕೆಯನ್ನು ನೀಡಲಿಲ್ಲ. ಇವೆಲ್ಲಾ ಸತ್ಯವಾಗಿರುವಾಗ ಅಮಿತ್‌ ಶಾ ಹೇಗೆ ಸಂಸತ್ತಿನಲ್ಲಿ ಅಸತ್ಯವಾದ ಮಾತುಗಳನ್ನು ಹೇಳಿದರು ಎಂದು ವಿಜಯನ್‌ ಪ್ರಶ್ನಿಸಿದ್ದಾರೆ.

ಭೂಕುಸಿತವಾದ ಸ್ಥಳದಲ್ಲಿ ಹಿಂದೆಂದೂ ಆಗದ ಮಳೆ ಸುರಿದಿದೆ. ಈಗ ಒಬ್ಬರನ್ನೊಬ್ಬರು ದೂಷಿಸದೇ ವಿಪತ್ತಿಗೆ ಒಳಗಾದವರನ್ನು ರಕ್ಷಿಸಲು ಸಾಮೂಹಿಕ ಪ್ರಯತ್ನ ಮಾಡಬೇಕಾಗಿದೆ ಎಂದು ಸಿಎಂ ವಿಜಯನ್‌ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

2 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago