ರಾಜ್ಯ

ವಯನಾಡು ಭೂಕುಸಿತ ದುರಂತ ಪ್ರಕರಣ: ಚಾಲಿಯಾರ್‌ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

ವಯನಾಡು: ವಯನಾಡು ಭೂಕುಸಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಿಯಾರ್‌ ನದಿ ದಡದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ವಯನಾಡು ಭೂಕುಸಿತ ದುರಂತ ಪ್ರಕರಣ ನಡೆದು ಒಂದು ವಾರವೇ ಕಳೆದಿದೆ. ಹೀಗಿರುವಾಗಲೇ ಈಗ ಚಾಲಿಯಾರ್‌ನದಿ ದಂಡೆಯ ಪಕ್ಕದಲ್ಲಿ ಶೋಧ ಕಾರ್ಯ ಆರಂಭಿಸಲಾಗಿದೆ. ಹೆಲಿಕಾಪ್ಟರ್‌ನಲ್ಲಿ ವಿಶೇಷ ತಂಡವು ಜಲಮೂಲಗಳು ಅಥವಾ ಅವಶೇಷಗಳನ್ನು ಸ್ಕ್ಯಾನ್‌ಮಾಡುತ್ತಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಶಾಲೆಯ ಸಮೀಪವಿರುವ ನದಿ, ಗ್ರಾಮ ಮತ್ತು ನದಿಯ ಕೆಳಭಾಗದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೇಘಶ್ರೀ ಮಾಹಿತಿ ನೀಡಿದ್ದಾರೆ.

ಇನ್ನು ಚಾಲಿಯಾರ್‌ನದಿ ಉದ್ದಕ್ಕೂ ದುರ್ಗಮ ಪ್ರದೇಶಗಳಿದ್ದು, ಕಳೆದೆರಡು ದಿನಗಳಿಂದ ಕೆಲವು ಸ್ಥಳೀಯ ಸ್ವಯಂಸೇವಕರು ಅಲ್ಲಿ ಸಿಕ್ಕಿಬಿದ್ದಿದ್ದಾರೆ ಎಂಬ ಮಾಹಿತಿ ಹೊರಬಂದಿದ್ದು, ಈಗ ಅವರನ್ನು ಕೂಡ ರಕ್ಷಿಸುವ ಕೆಲಸ ಮಾಡಲಾಗುತ್ತಿದೆ.

ರಕ್ಷಣಾ ಕಾರ್ಯಾಚರಣೆ ಇನ್ನೂ ಕೆಲ ದಿನಗಳು ಮುಂದುವರಿಯಲಿದ್ದು, ಶವಗಳನ್ನು ಹೊರತೆಗೆಯಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

2 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

2 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

2 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

2 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

2 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

16 hours ago