ಕೊಡಗು: ವಯನಾಡು ಭೂಕುಸಿತ ದುರಂತದಲ್ಲಿ ಕೊಡಗಿನ ದಂಪತಿಯೋರ್ವರು ಮಗನನ್ನು ಕಳೆದುಕೊಂಡು ತೀವ್ರ ದುಃಖದಲ್ಲಿದ್ದಾರೆ.
ಕೊಡಗಿನಲ್ಲಿ ನಿರಂತರ ಮಳೆಯಾಗುತ್ತಿದ್ದ ಪರಿಣಾಮ ಕಳೆದ ಮೂರು ವಾರಗಳ ಹಿಂದೆ ಕೂಲಿ ಹರಸಿ ದಂಪತಿ ಕೇರಳದ ವಯನಾಡಿಗೆ ಹೋಗಿದ್ದರು. ಜೊತೆಗೆ ಮಗನನ್ನೂ ಸಹ ವಯನಾಡಿಗೆ ಕರೆದುಕೊಂಡು ಹೋಗಿದ್ದರು. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕವಿತಾ ಹಾಗೂ ರವಿ ದಂಪತಿಯ ಪುತ್ರ ರೋಹಿತ್ ಸಾವನ್ನಪ್ಪಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಮೃತ ರೋಹಿತ್ ತಂದೆ ರವಿ ಅವರು, ಘಟನೆ ನಡೆದ ಬಳಿಕ ಪೊಲೀಸ್ ಅಧಿಕಾರಿಯೋರ್ವರು ನನ್ನ ಮಗನ ಮೃತದೇಹವನ್ನು ನನಗೆ ತೋರಿಸಿದರು. ಅದನ್ನು ನಾನು ಮುಟ್ಟಿದೆ. ಅದು ತುಂಬಾ ಮೃದುವಾಗಿತ್ತು. ಆದ್ದರಿಂದ ಮೃತದೇಹವನ್ನು ಕೊಡಗಿಗೆ ತರಲು ಸಾಧ್ಯವಾಗದೇ ವಯನಾಡಿನಲ್ಲಿ ಅಂತ್ಯಕ್ರಿಯೆ ನಡೆಸಿದ್ದೇವೆ ಎಂದು ಕಣ್ಣೀರು ಹಾಕಿದ್ದಾರೆ.
ಒಟ್ಟಿನಲ್ಲಿ ವಯನಾಡು ದುರಂತದಿಂದ ಹಲವರು ಈಗ ಸಂಕಷ್ಟದಲ್ಲಿದ್ದು, ಮುಂದೆ ದಿಕ್ಕು ತೋಚದ ರೀತಿಯಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಸರ್ಕಾರ ಹೇಗೆ ಪರಿಹಾರ ನೀಡುತ್ತೆ ಎಂಬುದನ್ನು ಕಾದು ನೋಡಬೇಕಿದೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…