ವಯನಾಡು: ಭೀಕರ ಭೂಕುಸಿತಕ್ಕೆ ದೇವರನಾಡು ಕೇರಳ ನಲುಗಿ ಹೋಗಿದ್ದು, ಸಾವಿನ ಸಂಖ್ಯೆ 350ಕ್ಕೆ ಏರಿಕೆಯಾಗಿದೆ.
5ನೇ ದಿನಕ್ಕೆ ಸೇನಾ ಕಾರ್ಯಾಚರಣೆ ಕಾಲಿಟ್ಟಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ನಡೆಸಿ ವೈದ್ಯರೇ ಸುಸ್ತಾಗಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಆಸ್ಪತ್ರೆಯಲ್ಲಿ ಗಾಯಾಳುಗಳ ಚೀರಾಟ ಮುಂದುವರಿದಿದೆ.
ಭೂಕುಸಿತ ಹಾಗೂ ಪ್ರವಾಹಕ್ಕೆ ಛಿದ್ರಗೊಂಡಿರುವ ದೇಹಗಳು ಘಟನೆಯ ಭೀಕರತೆ ಬೆಚ್ಚಿಡುತ್ತಿವೆ.
ಚಲಿಯಾರ್ ನದಿಯಲ್ಲೇ 135ಕ್ಕೂ ಹೆಚ್ಚು ದೇಹಗಳ ಅಂಗಾಂಗಳು ಪತ್ತೆಯಾಗಿವೆ. ಯಾರ ದೇಹ ಯಾರದ್ದು ಅನ್ನೋದೇ ತಿಳಿಯದಂತಹ ಪರಿಸ್ಥಿತಿ ಎದುರಾಗಿದ್ದು, ದೇಹಗಳು ಪ್ರವಾಹದ ರಭಸಕ್ಕೆ ನಜ್ಜುಗುಜ್ಜಾಗಿ ಹೋಗಿವೆ.
ಇಂದು ಸಹ 3 ಸಾವಿರ ಜನರು ಶವಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಬಂಡೆಗಳ ಕೆಳಗೆ, ಕೆಸರು, ಕಾಡಿನ ಅಂಚಿನಲ್ಲಿ ಶೋಧ ನಡೆಸುತ್ತಿದ್ದು, 50ಕ್ಕೂ ಹೆಚ್ಚು ಜೆಸಿಬಿಗಳು ಕಾರ್ಯಾಚರಣೆಗೆ ಇಳಿದಿವೆ. ಸ್ಥಳದಲ್ಲಿ ನಾಪತ್ತೆಯಾಗಿರುವ 250ಕ್ಕೂ ಹೆಚ್ಚು ಜನರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಇನ್ನು ವಯನಾಡಿನಲ್ಲಿ ಆಗಸ್ಟ್.7ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರಿದಿದೆ.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…