Mysore
22
haze

Social Media

ಸೋಮವಾರ, 29 ಡಿಸೆಂಬರ್ 2025
Light
Dark

ವಯನಾಡು ಭೂಕುಸಿತ ದುರಂತ ಪ್ರಕರಣ: 728 ಕುಟುಂಬಗಳಿಗೆ ತಾತ್ಕಾಲಿಕ ಪುನರ್ವಸತಿ ಪ್ರಕ್ರಿಯೆ ಪೂರ್ಣ

ವಯನಾಡು: ವಯನಾಡು ಭೂಕುಸಿತ ದುರಂತದಲ್ಲಿ ಮನೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದ ಜನರಿಗೆ ಈಗ ಪುನರ್ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಪರಿಹಾರ ಶಿಬಿರಗಳಲ್ಲಿ ಇದ್ದ ಸಂತ್ರಸ್ತ ಕುಟುಂಬಗಳನ್ನು ಬಾಡಿಗೆ ಮನೆಗೆ ಸ್ಥಳಾಂತರಿಸಲಾಗಿದೆ. ಕೇರಳ ಸರ್ಕಾರದ ಪ್ರಕಟಣೆಯ ಪ್ರಕಾರ ಒಟ್ಟು 2569 ಮಂದಿಯನ್ನು ಸರ್ಕಾರಿ ಮನೆ ಹಾಗೂ ಬಾಡಿಗೆ ಮನೆಗಳಿಗೆ ಸ್ಥಳಾಂತರಿಸಲಾಗಿದೆ.

ಈ ಮಧ್ಯೆ ವಯನಾಡು ಭೂಕುಸಿತಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಕೇಂದ್ರ ಸರ್ಕಾರಕ್ಕೆ ಸಮಗ್ರ ಮನವಿಯನ್ನು ಸಲ್ಲಿಸಿದೆ ಎಂದು ತಿಳಿದು ಬಂದಿದೆ.

ಪುನರ್ವಸತಿಗೊಂಡಿರುವ ಕುಟುಂಬಗಳಿಗೆ ಬ್ಯಾಕ್‌ ಟು ಹೋಮ್‌ ಕಿಟ್‌ ನೀಡುವ ಕಾರ್ಯ ಆರಂಭಿಸಲಾಗಿದೆ. ಇದರಲ್ಲಿ ಪೀಠೋಪಕರಣಗಳು, ಕಿಚನ್‌ ಕಿಟ್‌, ಆಹಾರ ಸಾಮಗ್ರಿ ಕಿಟ್‌, ನೈರ್ಮಲ್ಯ ಕಿಟ್‌ ಒಳಗೊಂಡಿರಲಿವೆ.

ಇನ್ನು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 119 ಮಂದಿ ನಾಪತ್ತೆಯಾಗಿದ್ದಾರೆ.

 

Tags:
error: Content is protected !!