ವಯನಾಡು: ವಯನಾಡು ಭೂಕುಸಿತ ದುರಂತದಲ್ಲಿ ಮನೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದ ಜನರಿಗೆ ಈಗ ಪುನರ್ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಪರಿಹಾರ ಶಿಬಿರಗಳಲ್ಲಿ ಇದ್ದ ಸಂತ್ರಸ್ತ ಕುಟುಂಬಗಳನ್ನು ಬಾಡಿಗೆ ಮನೆಗೆ ಸ್ಥಳಾಂತರಿಸಲಾಗಿದೆ. ಕೇರಳ ಸರ್ಕಾರದ ಪ್ರಕಟಣೆಯ ಪ್ರಕಾರ ಒಟ್ಟು 2569 ಮಂದಿಯನ್ನು ಸರ್ಕಾರಿ ಮನೆ ಹಾಗೂ ಬಾಡಿಗೆ ಮನೆಗಳಿಗೆ ಸ್ಥಳಾಂತರಿಸಲಾಗಿದೆ.
ಈ ಮಧ್ಯೆ ವಯನಾಡು ಭೂಕುಸಿತಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಕೇಂದ್ರ ಸರ್ಕಾರಕ್ಕೆ ಸಮಗ್ರ ಮನವಿಯನ್ನು ಸಲ್ಲಿಸಿದೆ ಎಂದು ತಿಳಿದು ಬಂದಿದೆ.
ಪುನರ್ವಸತಿಗೊಂಡಿರುವ ಕುಟುಂಬಗಳಿಗೆ ಬ್ಯಾಕ್ ಟು ಹೋಮ್ ಕಿಟ್ ನೀಡುವ ಕಾರ್ಯ ಆರಂಭಿಸಲಾಗಿದೆ. ಇದರಲ್ಲಿ ಪೀಠೋಪಕರಣಗಳು, ಕಿಚನ್ ಕಿಟ್, ಆಹಾರ ಸಾಮಗ್ರಿ ಕಿಟ್, ನೈರ್ಮಲ್ಯ ಕಿಟ್ ಒಳಗೊಂಡಿರಲಿವೆ.
ಇನ್ನು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 119 ಮಂದಿ ನಾಪತ್ತೆಯಾಗಿದ್ದಾರೆ.
ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್ ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…
ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…