ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಜನವರಿ 11 ) ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ವೇಳೆ ಕಾಂಗ್ರೆಸ್ ರಾಮಮಂದಿರಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂಬ ಕೆಲ ಬಿಜೆಪಿ ನಾಯಕರ ಹೇಳಿಕೆಗಳಿಗೆ ಪ್ರತಿಕ್ರಿಯೆಯನ್ನೂ ಸಹ ನೀಡಿದರು. ಈ ವಿಡಿಯೊವನ್ನು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ “ನಾವೂ ರಾಮಭಕ್ತರೇ, ರಾಮನನ್ನು ಆರಾಧಿಸುವವರೆ, ರಾಮನ ಭಜನೆ ಮಾಡುವವರೆ, ರಾಮನ ದೇವಾಲಯ ಕಟ್ಟಿದ್ದೇವೆ. ಬಿಜೆಪಿಯವರಂತೆ ರಾಮನ ಹೆಸರಲ್ಲಿ ರಾಜಕಾರಣ ಮಾಡುವವರಲ್ಲ. ರಾಮಮಂದಿರಕ್ಕೆ ನಮ್ಮ ವಿರೋಧವಲ್ಲ, ಮಂದಿರದ ಹೆಸರಲ್ಲಿ ಬಿಜೆಪಿ ಮಾಡುತ್ತಿರುವ ರಾಜಕಾರಣಕ್ಕೆ ನಮ್ಮ ವಿರೋಧವಿದೆ” ಎಂದು ಬರೆದುಕೊಂಡಿದ್ದಾರೆ.





