Mysore
20
scattered clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ನಮ್ಮಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಾಹಾರ ಕೂಟದಲ್ಲಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ, ದೆಹಲಿಯಲ್ಲಿ ಸರ್ವಪಕ್ಷ ಸಂಸದರ ಸಭೆ, ವಿಧಾನಸಭೆ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳು ಸೇರಿದಂತೆ ಪಕ್ಷ, ಸರ್ಕಾರ ಹಾಗೂ ರಾಜಕೀಯ ವಿಚಾರಗಳ ಕುರಿತು ಉಪಹಾರ ಕೂಟದಲ್ಲಿ ಚರ್ಚೆ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಗಳನ್ನು ಉಪಾಹಾರ ಕೂಟಕ್ಕೆ ಬರುವಂತೆ ಮೊದಲು ಕರೆದಿದ್ದೆ. ಅವರು ಮೊದಲು ನೀವೇ ನಮ್ಮ ಮನೆಗೆ ಬನ್ನಿ, ಆಮೇಲೆ ಬರುತ್ತೇನೆ ಎಂದಿದ್ದರು. ಅದರಂತೆ ನಾನು ಅವರ ಮನೆಗೆ ಹೋಗಿದ್ದೆ. ನಮ್ಮ ಮನೆಗೆ ಆಹ್ವಾನಿಸಿದ್ದೆ. ನಾವಿಬ್ಬರೂ ಬಹಳ ಸಂತೋಷದಿಂದ ಉಪಹಾರ ಸೇವಿಸಿದ್ದೇವೆ. ಈ ವೇಳೆ ರಾಜಕೀಯವಾಗಿಯೂ ಚರ್ಚೆ ಮಾಡಿದ್ದೇವೆ ಎಂದು ಹೇಳೀದರು.

ಇದನ್ನೂ ಓದಿ:-ಸಂಚಾರ ಸಾಥಿ ಆಪ್‌ ಕಡ್ಡಾಯವಲ್ಲ, ಡಿಲೀಟ್‌ ಮಾಡಬಹುದು: ಕೇಂದ್ರ ಸರ್ಕಾರ ಸ್ಪಷ್ಟನೆ

ಪದವೀಧರ ಹಾಗೂ ಶಿಕ್ಷಕರ ನಾಲ್ಕು ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಿದೆ. ಈ ವಿಚಾರವಾಗಿ ನಾವಿಬ್ಬರೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೆ ಚರ್ಚೆ ಮಾಡಿದ್ದೇವೆ. ಪಕ್ಷ ಹಾಗೂ ಸರ್ಕಾರದ ವಿಚಾರವನ್ನು ಚರ್ಚೆ ಮಾಡಿದ್ದೇವೆ. ಅಧಿವೇಶನದಲ್ಲಿ ಯಾವ ರೀತಿ ಹೋರಾಟ ಮಾಡಬೇಕು, ಶಾಸಕರಿಗೆ ನೀಡಬೇಕಾದ ಸಂದೇಶಗಳು, ವಿರೋಧ ಪಕ್ಷಗಳು ಯಾವೆಲ್ಲಾ ವಿಚಾರ ಪ್ರಸ್ತಾಪಿಸಬಹುದು ಎಂದು ಚರ್ಚೆ ಮಾಡಿದ್ದೇವೆ. ವಿರೋಧ ಪಕ್ಷಗಳು ಯಾವುದೇ ವಿಚಾರ ಪ್ರಸ್ತಾಪಿಸಿದರು, ನಾವು ಒಂದೇ ಧ್ವನಿಯಲ್ಲಿ ಎದುರಿಸಲು ಸಿದ್ಧರಿದ್ದೇವೆ ಎಂದರು.

ಇನ್ನು ದೆಹಲಿಗೆ ಹೋಗಿ ಸರ್ವಪಕ್ಷ ಸಂಸದರ ಸಭೆ ನಡೆಸುವ ಬಗ್ಗೆ ಚರ್ಚೆ ಮಾಡಿದ್ದು, ಡಿ.8 ರಂದು ದೆಹಲಿಗೆ ಹೋಗಿ ವಾಪಸ್ಸಾಗಬೇಕು ಎಂದು ತೀರ್ಮಾನಿಸಿದ್ದೇವೆ. ಮೇಕೆದಾಟು ವಿಚಾರವಾಗಿ ನ್ಯಾಯಾಲಯದ ತೀರ್ಪು ಬಂದಿದ್ದು, ಮೆಕ್ಕೆಜೋಳ ದರ ವಿಚಾರ, ಕೇಂದ್ರ ಸರ್ಕಾರದಿಂದ ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ನೀರಾವರಿ ಯೋಜನೆಗಳಿಗೆ ಅನುದಾನ ಬಾರದಿರುವ ವಿಚಾರವಾಗಿ ಸಂಸದರ ಜತೆ ಚರ್ಚೆ ಮಾಡಿ ಅವರಿಗೆ ಜವಾಬ್ದಾರಿ ನೀಡಬೇಕಾಗಿದೆ. ಈ ಸಭೆಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರನ್ನು ಹಾಗೂ ಜೆಡಿಎಸ್ ನಾಯಕರನ್ನು ಕರೆದುಕೊಂಡು ಹೋಗಲು ತೀರ್ಮಾನಿಸಿದ್ದೇವೆ” ಎಂದು ಹೇಳಿದರು.

Tags:
error: Content is protected !!