ರಾಜ್ಯ

ಕೊಟ್ಟ ಮಾತಿನಂತೆ ನಡೆಯುತ್ತಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು : ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಪ್ರಣಾಳಿಕೆಯಲ್ಲಿ ನೀಡಿದ್ದ 580 ಭರವಸೆಗಳ ಪೈಕಿ 290ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಿದ್ದೇವೆ ಉಳಿದ ಅವಧಿಯಲ್ಲಿ ಇದನ್ನೂ ಸಹ ಈಡೇರಿಸುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಪಥ ಮಾಡಿದರು.

ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಆಯೋಜಿಸಿದ್ದ, ಮೂರು ವರ್ಷಗಳ ಸಾಧನಾ ಸಮರ್ಪಣಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಅವರು ಮಾತನಾಡಿದರು.

ನಾವು 2023 ರ ವಿಧಾನಸಭೆ ಚುನಾವಣೆ ಪ್ರಾರಂಭಕ್ಕೂ ಮುನ್ನ ರಾಜ್ಯದ ಜನತೆಗೆ ಒಟ್ಟು 580 ಭರವಸೆಗಳನ್ನು ಕೊಟ್ಟಿದ್ದೇವು. ಈಗಾಗಲೇ 290 ಭರವಸೆಗಳನ್ನು ಈಡೇರಿಸಿದ್ದೇವೆ. ಮುಂದಿನ ಎರಡು ವರ್ಷಗಳ ಕಾಲ ನಾವೇ ಅಧಿಕಾರದಲ್ಲಿರುವುದರಿಂದ ಎಲ್ಲವನ್ನೂ ಕಾಲಮಿತಿಯೊಳಗೆ ಅನುಷ್ಠಾನ ಮಾಡುತ್ತೇವೆ. ಈ ಬಗ್ಗೆ ಯಾರಿಗೂ ಯಾವುದೇ ಅನುಮಾನ ಬೇಡ ಎಂದು ಮನವಿ ಮಾಡಿದರು.

ಪ್ರಮುಖವಾಗಿ ನಾವು ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಒಂದೊಂದಾಗಿ ಈಡೇರಿಸಿದ್ದಲ್ಲದೆ ಉಳಿದ ಭರವಸೆಗಳನ್ನೂ ಈಡೇರಿಸಿ ನಾವು ನಿಮ್ಮ ಮುಂದೆ ಧನ್ಯತೆ ಅರ್ಪಿಸಲು ಇಲ್ಲಿ ನಿಮ್ಮ ಮುಂದೆ ನಿಂತಿದ್ದೇವೆ. ನಾವು ಅಧಿಕಾರಕ್ಕೆ ಬಂದ ಬಳಿಕ ಸರ್ವ ಜಾತಿ, ಸರ್ವ ಧರ್ಮದ ಸಕಲ ಜನತೆಯ ಅಭಿವೃದ್ಧಿಗೆ ಕೆಲಸ ಮಾಡಿದ್ದೇವೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ ಎಂದು ತಮ್ಮ ಸರ್ಕಾರದ ಸಾಧನೆಗಳನ್ನು ಕೊಂಡಾಡಿದರು.

ಇಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ತುಂಬುತ್ತಿರುವ ಹೊತ್ತಲ್ಲಿ ಜಿ.ಪರಮೇಶ್ವರ್ ಅವರು ಸರ್ಕಾರದ ಸಾಧನಾ ಸಮರ್ಪಣಾ ಸಮಾವೇಶ ಮತ್ತು ಕಂದಾಯ ಇಲಾಖೆಯ ಕ್ರಾಂತಿಕಾರಿ ಜನೋಪಯೋಗಿ ಕೆಲಸಗಳ ಜನಾರ್ಪಣೆ ಸಮಾವೇಶವನ್ನು ಸ್ವಯಂಸ್ಫೂರ್ತಿಯಿಂದ ತುಮಕೂರಿನಲ್ಲಿ ಅಚ್ಚುಕಟ್ಟಾಗಿ ಆಯೋಜಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

7 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

7 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

14 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

14 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

14 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

14 hours ago