Mysore
25
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಕೇಂದ್ರದ ಬಳಿ ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ನೀಡಿ: ಡಿಕೆಶಿ

ಬೆಂಗಳೂರು : ಆರ್ಥಿಕ ವರ್ಷದಲ್ಲಿ ಮುಂಗಾರು ಕೈಕೊಟ್ಟಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ಬರ ಪರಿಹಾರಕ್ಕಾಗಿ ನಾವು ಕೇಂದ್ರಕ್ಕೆ ಮನವಿ ಮಾಡಿದ್ದು, ಕಾನೂನು ಪ್ರಕಾರ ನಮಗೆ ಪರಿಹಾರ ನೀಡಬೇಕು. ಕೇಂದ್ರದ ಬಳಿ ನಾವು ಭಿಕ್ಷೆ ಬೇಡುತ್ತಿಲ್ಲ ಎಂದು ಕೇಂದ್ರದ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್‌-ಬಿಜೆಪಿ ಅನುಕಂಪದಿಂದ ರಾಜ್ಯದಲ್ಲಿ ಬರ ಅಧಯಯನಕ್ಕೆ ಮುಂದಾಗಿವೆ. ಆದರೆ, ರಾಜ್ಯ ಸರ್ಕಾರ ಬರ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ರಾಜ್ಯದಲ್ಲಿ ಬಿಜೆಪಿಯ 266 ಸಂಸದರು, ಜೆಡಿಎಸ್‌-ಬಿಜೆಪಿ ಶಾಸಕರು ಪ್ರಧಾನಿ ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಲಿ ಎಂದರು. ನಿನ್ನೆ ಸಚಿವ ಸಂಪುಟದಲ್ಲಿ 800 ಕೋಟಿ ಬಿಡುಗಡೆ ಮಾಡಿದ್ದೇವೆ. ಕೇಂದ್ರ ವರದಿ ಆಧಾರದ ಮೇಲೆ ಬರ ಪರಿಹಾರ ಬಿಡುಗಡೆ ಮಾಡಲಿ ಇಲ್ಲವಾದರೇ ಪರಿಹಾರ ಕೊಡಲು ಆಗುವುದಿಲ್ಲಿ ಎಂದು ಹೇಳಲಿ, ಕುಡಿಯುವ ನೀರು, ಮೇವು ಸೇರಿದಂತೆ ಎಲ್ಲವನ್ನು ಕೊಡುವ ವಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸವಾಲು ಹಾಕಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ