ಬೆಂಗಳೂರು: 9 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಿಲ್ಲ, ಅವುಗಳನ್ನು ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವ ವಿಚಾರದ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದರು.
ಇದಕ್ಕೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್, ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿಲ್ಲ, ಬದಲಾಗಿ ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತಿದ್ದೇವೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಸರ್ಟಿಫಿಕೆಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ ವಿವಿಯಲ್ಲಿ ಸರ್ಟಿಫಿಕೆಟ್ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ.
ಎಸ್‌ಎಂ ಕೃಷ್ಣ ವಿದೇಶಾಂಗ ಸಚಿವರಾಗಿದ್ದಾಗ ವಿಜಯೇಂದ್ರ ಅವರ ಅಕ್ಕನ ಮಗ ಪಿಎಇಎಸ್ ವಿವಿಯಲ್ಲಿ ಓದಿದ್ದರೂ ವಿದೇಶದಲ್ಲಿ ಪ್ರವೇಶ ಸಿಗಲಿಲ್ಲ. ಪಿಇಎಸ್ ಫೇಮಸ್ ಕಾಲೇಜು ಆದರೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರವೇಶ ಸಿಗಲಿಲ್ಲ. ವಿವಿಗಳನ್ನು ವಿಲೀನ ಮಾಡುತ್ತಿದ್ದೇವೆ ಅಷ್ಟೇ ಮುಚ್ಚುತ್ತಿಲ್ಲ ಎಂದು ತಿಳಿಸಿದರು.
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…
ಬೆಂಗಳೂರು: ಧುರಂಧರ್-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…
ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…
ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…