ರಾಜ್ಯ

ವಿವಿಗಳನ್ನು ಮುಚ್ಚುತ್ತಿಲ್ಲ ವಿಲೀನ ಮಾಡುತ್ತಿದ್ದೇವೆ: ಡಿಸಿಎಂ ಡಿಕೆಶಿ

ಬೆಂಗಳೂರು: 9 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಿಲ್ಲ, ಅವುಗಳನ್ನು ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವ ವಿಚಾರದ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದರು.

ಇದಕ್ಕೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿಲ್ಲ, ಬದಲಾಗಿ ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತಿದ್ದೇವೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಸರ್ಟಿಫಿಕೆಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ ವಿವಿಯಲ್ಲಿ ಸರ್ಟಿಫಿಕೆಟ್‌ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ.

ಎಸ್‌ಎಂ ಕೃಷ್ಣ ವಿದೇಶಾಂಗ ಸಚಿವರಾಗಿದ್ದಾಗ ವಿಜಯೇಂದ್ರ ಅವರ ಅಕ್ಕನ ಮಗ ಪಿಎಇಎಸ್‌ ವಿವಿಯಲ್ಲಿ ಓದಿದ್ದರೂ ವಿದೇಶದಲ್ಲಿ ಪ್ರವೇಶ ಸಿಗಲಿಲ್ಲ. ಪಿಇಎಸ್‌ ಫೇಮಸ್‌ ಕಾಲೇಜು ಆದರೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರವೇಶ ಸಿಗಲಿಲ್ಲ. ವಿವಿಗಳನ್ನು ವಿಲೀನ ಮಾಡುತ್ತಿದ್ದೇವೆ ಅಷ್ಟೇ ಮುಚ್ಚುತ್ತಿಲ್ಲ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

3 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

4 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

7 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

8 hours ago