ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.
ಅವರು ಇಂದು ರಾಣೇಬೆನ್ನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, ಸಂವಿಧಾನದ 73, 74ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ತಂದಿದ್ದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ದಕ್ಷಿಣದಲ್ಲಿ 50% ಮಾಡಿದರೆ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ಅಲ್ಲಿಗೆ 120 ಸ್ಥಾನಗಳಾಗುತ್ತವೆ. ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ಅದರ ಪರವಾಗಿದ್ದೇವೆ ಎಂದರು.
ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರಷ್ಟು ಬಹುಮತ ಲೋಕಸಭೆಯಲ್ಲಿ ಇರಬೇಕು. 50% ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಬೇಕು ಎಂದರು. ಕ್ಷೇತ್ರ ಮರು ವಿಂಗಡಣೆಗೆ ವಿರೋಧ ಮಾಡಿದ್ದೇವೆ ಹೊರತು ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡು, ಪಶ್ಚಿಮ ಬಂಗಾಳದ ಚುನಾವಣೆ ಇರುವುದರಿಂದ ರಾಜಕೀಯ ಮಾಡುತ್ತಿದ್ದಾರೆ ಎಂದರು.





