ಬೆಂಗಳೂರು: ಕಾಂಗ್ರೆಸ್ ನಾಯಕರ ಪ್ರಚಾರಕ್ಕಾಗಿ ವಿಬಿ ಜಿ ರಾಮ ಜಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮನ್‌ರೇಗಾ ಯೋಜನೆ ಬಗ್ಗೆ ಓಪನ್ ಡಿಬೇಟ್ ಮಾಡೋಣ ಎಂದು ಹೇಳಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನ್‌ರೇಗಾ ಯೋಜನೆ ಬಗ್ಗೆ ಚರ್ಚೆಗೆ ನಾವು ಸಿದ್ಧ ಎಂದು ಟಾಂಗ್ ನೀಡಿದರು.
ಯೋಜನೆ ಬಗ್ಗೆ ಚರ್ಚಿಸಲು ನಾವು ಯಾವಾಗಲೂ ಸಿದ್ಧ. ನಾವು ದೊಡ್ಡ ಆಂದೋಲನವನ್ನೇ ಮಾಡುತ್ತಿದ್ದೇವೆ. ಚರ್ಚೆಗೆ ಬರಲಿ ಎಂದು ತಿಳಿಸಿದರು.
ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂಬ ಹೇಳಿಕೆಗೆ ಉತ್ತರಿಸಿದ ಅವರು, ಬಿಜೆಪಿಯವರು ಬರೀ ಸುಳ್ಳು ಹೇಳುತ್ತಿದ್ದಾರೆ. ಅವರಿಗೆಲ್ಲಾ ಉತ್ತರ ಕೊಡುತ್ತಾ ಕುಳಿತುಕೊಳ್ಳಲು ಆಗುತ್ತಾ ಎಂದು ತಿರುಗೇಟು ನೀಡಿದರು.





