ಬೆಂಗಳೂರು : ನಾವು ಈ ಹಿಂದೆ ಅಧಿಕಾರದಲ್ಲಿದ್ದಾಗ ನುಡಿದಂತೆ ನಡೆದಿದ್ದೇವೆ. ಈಗಲೂ ನುಡಿದಂತೆ ನಡೆಯುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಜಕಾರಣಕ್ಕಾಗಿ ಟೀಕೆ ಮಾಡುತ್ತಿದ್ದಾರೆ. ಅವರಿಗೆ ಟೀಕೆ ಮಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಜನರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತೇವೆ. ಪೂರ್ಣ ಪ್ರಮಾಣದ ಮಂತ್ರಿಮಂಡಲವಿದ್ದರೆ, ಉತ್ತಮ ಕೆಲಸ ಮಾಡಲು ಸಾಧ್ಯ. ಹಾಗಾಗಿ ಪೂರ್ಣ ಪ್ರಮಾಣದಲ್ಲಿ ಸಂಪುಟ ರಚನೆಯಾಗಿದೆ ಎಂದು ಅವರು ಹೇಳಿದರು.