ಕಲಬುರಗಿ : ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ನೀರು ಕೊಡಬೇಕು. ಈವರೆಗೆ ತಮಿಳುನಾಡಿಗೆ 37.07 ಟಿಎಂಸಿ ನೀರು ಬಿಡಲಾಗಿದೆ. ಬಾಕಿ ತಮಿಳುನಾಡಿಗೆ ಬಿಡಲು ನಮ್ಮ ಬಳಿ ನೀರು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವಧಿಯಲ್ಲೂ ಸಹ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಸಿಡಬ್ಲೂಆರ್ಸಿ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ.
ತಮಿಳುನಾಡಿಗೆ ಕೆಆರ್ಎಸ್ ಡ್ಯಾಮ್ನಿಂದ ನೀರು ಹರಿಸುವ ವಿಚಾರವಾಗಿ ಮಾತನಾಡಿದ್ದು, ಮಳೆಯಿಲ್ಲದೆ ನಮ್ಮ ಡ್ಯಾಮ್ಗಳಲ್ಲಿ ನೀರಿನ ಕೊರತೆ ಇದೆ. ಈ ಸಂಬಂಧ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಯಡಿಯೂರಪ್ಪ ಯಾವ ನೈತಿಕತೆ ಹೊಂದಿದ್ದಾರೆ ? : ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಐದು ಗ್ಯಾರಂಟಿ ಯೋಜನೆ ಅಭಿವೃದ್ಧಿ ಅಲ್ಲವಾ. ಯಡಿಯೂರಪ್ಪ ಏಳು ಕಿಲೋ ಅಕ್ಕಿಯನ್ನು ಐದು ಕಿಲೋ ಮಾಡಿದ್ದು ಇದೇ ಯಡಿಯೂರಪ್ಪ. ಐದು ಗ್ಯಾರಂಟಿ ಕೊಟ್ಟಿದ್ದೇವೆ ಅಂತ ಪರವಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಯಡಿಯೂರಪ್ಪ ಯಾವ ನೈತಿಕತೆ ಹೊಂದಿದ್ದಾರೆ ಎಂದು ಪ್ರಶ್ನಿಸಿದರು.