ಬೆಂಗಳೂರು : ಪಿಎಸ್ಐ ಹಗರಣ ನ್ಯಾಯಾಂಗ ತನಿಖೆಗೆ ವಹಿಸಿದ್ದು ದ್ವೇಷದ ರಾಜಕಾರಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಶನಿವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದವರು ಪಿಎಸ್ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ್ದಾರೆ. ಈ ದ್ವೇಷದ ರಾಜಕಾರಣ ಎಲ್ಲಿಗೆ ಹೋಗುತ್ತಿದೆ ಅನ್ನುವುದು ಗೊತ್ತಾಗುತ್ತಿಲ್ಲ.
ಪಿಎಸ್ಐ ಹಗರಣ ನಾವೇ ಹೊರಗೆ ತಂದು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇವು. ಪ್ರಕರಣದಲ್ಲಿ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದೇವೆ.ಈ ಹಗರಣದಲ್ಲಿ ಕಾಂಗ್ರೆಸ್ನವರು ಇದ್ದಾರೆ. ಪ್ರಕರಣದ ತನಿಖೆ ನಡೆದು ಕೊರ್ಟ್ನಲ್ಲಿದೆ. ಈ ಸಂದರ್ಭ ಮತ್ತೆ ತನಿಖೆಗೆ ಆದೇಶ ಮಾಡಿರುವುದು ದ್ವೇಷ ರಾಜಕೀಯವನ್ನು ತೋರಿಸುತ್ತದೆ ಎಂದರು.