Mysore
25
light rain

Social Media

ಭಾನುವಾರ, 03 ನವೆಂಬರ್ 2024
Light
Dark

ರಾಜ್ಯದಲ್ಲಿ ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ: ಆರ್‌. ಅಶೋಕ್ ವೆಂಗ್ಯ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ರಾಜ್ಯದ ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ. ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಮಹಿಳೆಯರು ಕೆಲಸಕ್ಕೆ ಹೋದರೆ ಮನೆಗೆ ವಾಪಸ್ ಬರುವ ಗ್ಯಾರಂಟಿಯೇ ಇಲ್ಲ ಎಂದು ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ನಡೆದ ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಕುರಿತ ಜೆಡಿಎಸ್ -ಬಿಜೆಪಿ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಶಿವರಾಮೇಗೌಡ ಎನ್ನುವ ವ್ಯಕ್ತಿ ಹೇಳುತ್ತಾನೆ ಮೋದಿಗೆ ಹೇಳಿ ಜೆಡಿಎಸ್ -ಬಿಜೆಪಿ ಭಾಗ ಮಾಡಿಬಿಟ್ಟರೆ ನಮಗೆ ಒಳ್ಳೆಯದು. ಇವರೆಂಥಾ ಚಂಡಾಳರು ಎನ್ನುವುದು ಇದರಿಂದ ಗೊತ್ತಾಗುತ್ತದೆ. ಮುಂದಿನ ವಿಧಾನಸಭೆ ಚುನಾವಣೆವರೆಗೂ ಇವರು ಒಂದಾಗಿದ್ದರೆ ನಮಗೆ ಉಳಿಗಾಲ ಇಲ್ಲ ಎನ್ನುವುದು ಅವರ ಹೆದರಿಕೆ ಎಂದು ಅವರು ಲೇವಡಿ ಮಾಡಿದರು.

ಇವರು ಕುಮಾರಸ್ವಾಮಿ ಅವರ ಬೆನ್ನಿಗೆ ಚೂರಿ ಹಾಕಿದರು ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಶೋಕ್ ಅವರು; ಕೆಲಸ ಆಗಬೇಕಾದರೆ ಕೈ ಎತ್ತು. ಕೆಲಸ ಆದ ಮೇಲೆ ಚೂರಿ ಹಾಕು. ಇದೇ ಕಾಂಗ್ರೆಸ್ ನೀತಿ. ನಾನು ಹದಿನಾಲ್ಕು ತಿಂಗಳು ದುಷ್ಟರ ಸಹವಾಸ ಮಾಡಿದ್ದೆ, ಅವರನ್ನು ನನ್ನನ್ನು ಕ್ಲರ್ಕ್, ಜವಾನನ ರೀತಿ ನಡೆಸಿಕೊಂಡರು ಎಂದರು.

ಕಾಂಗ್ರೆಸ್ ಸರಕಾರ ಎಲ್ಲ ಕಡೆ ಲೂಟಿ ಮಾಡುತ್ತಿದೆ. ಈಗ ಬಿಡಿಎ ಕಾಂಪ್ಲೆಕ್ಸ್ ಗಳನ್ನು ಮಾರಾಟಕ್ಕೆ ಇಟ್ಟಿದೆ. ಹಿಂದೆ ಲಕ್ಷ್ಮಣರಾವ್ ಅವರಂಥ ಮಹಾನುಭಾವರು ಇವನ್ನೆಲ್ಲ ಕಾಪಾಡಿಕೊಂಡು ಬಂದಿದ್ದರು. ಸರ್ಕಾರದಲ್ಲಿ ಹಣ ಇಲ್ಲ. ಅವರ ವರಿಷ್ಠರಿಗೆ ಕಪ್ಪ ಕೊಡಲು ಇಲ್ಲಿ ಲೂಟಿ ಮಾಡಲು ಹೊರಟಿದ್ದಾರೆ ಎಂದು ಅಶೋಕ್ ಟೀಕಿಸಿದರು.

 

Tags: