ರಾಜ್ಯ

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶ ಈಗಾಗಲೇ ತಿಳಿದಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ, ಒಂದರಲ್ಲಿ ಕಾಂಗ್ರೆಸ್ ಜಯಗಳಿಸಿರುವುದು ಬಹುತೇಕ ಖಚಿತವಾಗಿದೆ.

ಕಾಂಗ್ರೆಸ್‌ ಎರಡು ರಾಜ್ಯಗಳಲ್ಲಿ ಗೆಲುವು ಸಾಧಿಸುವ ಕುರಿತು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದರು, ಆದರೆ ಅಚ್ಚರಿಯೆಂಬಂತೆ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದ್ದು,  ಹೀಗಾಗಿ ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಸಿಎಂ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವನ್ನು ತಿಳಿಸಿದರು. ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?

ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ.

ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್ ಘಡಗಳಲ್ಲಿ ಹಿನ್ನಡೆ ಆಗಿದೆ.

ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ.

ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು.

ಬಿಜೆಪಿ ಬಿಆರ್‌ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡದ್ದು ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು‌ ಕೂಡಾ ನಮ್ಮ ಗೆಲುವಿಗೆ ಕಾರಣ.

ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜೊತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು‌ ಮುಂದುವರಿಸಿದೆ.

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ‌ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಕೂಡಾ ಅವಕಾಶ ಇರಲಿಲ್ಲ ರಾಜಸ್ತಾನದಲ್ಲಿ ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಪಕ್ಷವನ್ನು‌ ಬದಲಾಯಿಸುವ ಕಾರಣದಿಂದಾಗಿ ಅಶೋಕ್ ಗೆಹ್ಲೋತ್ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ.

ರಾಜಸ್ತಾನ ಮತ್ತು ಚತ್ತೀಸ್ ಘಡ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಆಡಳಿತ ವಿರೋಧಿ ಅಲೆ ಕೂಡಾ ಕಾರಣ. ಇತ್ತೀಚಿನ ವರ್ಷಗಳಲ್ಲಿ ರಾಜಸ್ತಾನದಲ್ಲಿ ಯಾವುದೇ ಆಡಳಿತ ಪಕ್ಷ ಮರಳಿ ಅಧಿಕಾರಕ್ಕೆ ಬಂದಿರುವ ಉದಾಹರಣೆ ಇಲ್ಲ. ಅಲ್ಲಿನ ಮತದಾರರು ಪ್ರತಿ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿಯೂ ಆ ಪರಂಪರೆಯನ್ನು‌ ಮುಂದುವರಿಸಿದ್ದಾರೆ ಎಂದು ಸಿಎಂ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ತೆಲಂಗಾಣದಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 65ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಬಿಆರ್‍ಎಸ್ 39, ಬಿಜೆಪಿ 8, ಎಐಎಂಐಎಂ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

andolanait

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

14 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

14 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

14 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

14 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

14 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

14 hours ago