ಬೆಂಗಳೂರು: ನಮಗೆ ಮೋದಿಯ ರಾಮ ಬೇಡ, ದಶರಥ ರಾಮ ಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ನಿನ್ನೆ(ಸೋಮವಾರ) ಜೈ ಶ್ರೀರಾಮ್ ಅಂತ ಘೋಷಣೆ ಕೂಗಿರುವುದಕ್ಕೆ ಟೀಕೆ ಮಾಡಿರುವ ಬಿಜೆಪಿಗೆ, ಸಿದ್ದರಾಮಯ್ಯ ಜೈ ಶ್ರೀರಾಮ್ ಅಂದರೆ ತಪ್ಪೇನು? ನಾವೆಲ್ಲರೂ ಜೈ ಶ್ರೀರಾಮ್ ಅಂತ ಹೇಳಿದ್ದೇವೆ. ಹೇಳದೇ ಇದ್ದರೆ ಶ್ರೀರಾಮನ ವಿರೋಧಿ ಅಂತಾರೆ. ಹೇಳಿದರೆ ಹೀಗೆ ಅಂತಾರೆ. ಇದರಲ್ಲಿ ಯಾವುದು ಸರಿ ಎಂದು ಪರಮೇಶ್ವರ್ ಪ್ರಶ್ನ ಮಾಡಿದ್ದಾರೆ.
ನಾವೆಲ್ಲ ಶ್ರೀರಾಮನ ಭಕ್ತರೇ, ಒಂದಲ್ಲ ಒಂದು ರೀತಿ ಶ್ರೀರಾಮನ ಆದರ್ಶ ಪಾಲನೆ ಮಾಡಬೇಕು ಅಂತ ಹೇಳ್ತೀವಿ. ಶ್ರೀರಾಮ ಇವರಾರೋ 4 ಜನಕ್ಕೆ ಆಗೋದಲ್ಲ. ನಮಗೆ ದಶರಥ ರಾಮ ಬೇಕು. ನಮಗೆ ಮೋದಿ ರಾಮ ಬೇಕಾಗಿಲ್ಲ. ನಮಗೆ ಈ ದೇಶವನ್ನು ರಾಮ ರಾಜ್ಯ ಮಾಡಿದ ದಶರಥ ರಾಮ ಬೇಕೆ ಹೊರತು ರಾಮ ಹೆಸರು ಹೇಳಿಕೊಂಡು ಒಡೆದಾಳುವ ನೀತಿ ಆಚರಣೆ ಮಾಡುವವರು ನಮಗೆ ಬೇಕಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಕಿಡಿಕಾರಿದ್ದಾರೆ.
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…
ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್‌ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…
ಕೀರ್ತಿ ಇದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಚಹ ಮಾಡಿದ ನಂತರ ಉಳಿದ ಜೊಗಟು, ಈರುಳ್ಳಿ ಸಿಪ್ಪೆ, ಚಿಂದಿ ಬಟ್ಟೆ, ಹರಿದ…
ಅಮೆರಿಕದ ಸಿಯಾಟಲ್‌ನಲ್ಲಿ ಮಗನಿಗೆ ಹೊಸ ಕೆಲಸ ಸಿಕ್ಕಿತ್ತು. ಮನೆ ಮಾಡಿದ. ಅಲ್ಲಿ ಮನೆ ಶಿಫ್ಟ್ ಮಾಡುವುದೆಂದರೆ ನಾವೇ ಸಕಲವೂ ಆಗಿರುವುದರಿಂದ…
ಮುಂಚೆ ಕಾಲವೊಂದಿತ್ತು. ಸಮಯ ಕಳೆಯಲು ಎಲ್ಲರೂ ಪುಸ್ತಕದ ಮೊರೆ ಹೋಗು ತ್ತಿದ್ದರು. ಮನೆ ಹತ್ತಿರದ ಪುಸ್ತಕ ದಂಗಡಿ, ಗ್ರಂಥಾಲಯ, ಸ್ನೇಹಿತರ…