ರಾಜ್ಯ

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ

ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ ದಿನ ಪೂರೈಸಿದ್ದು, ಇದೇನು ಮೈಲಿಗಲ್ಲಲ್ಲ. ಬಡವರಿಗೆ, ದಲಿತರಿಗೆ, ಹಿಂದುಳಿದ ವರ್ಗದವರಿಗೆ, ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಇದನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದರು.

ಹಾವೇರಿಯಲ್ಲಿ ಶನಿವಾರ ಮಾತನಾಡಿದ ಅವರು, ಸಾಧನಾ ಸಮಾವೇಶಕ್ಕೆ ಬಿಜೆಪಿಯವರು ವಿರೋಧ ಮಾಡುತ್ತಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ ಬಿಜೆಪಿಯವರು ಹೊಟ್ಟೆ ಕಿಚ್ಚಿನಿಂದ ಹಾಗೆ ವಿರೋಧ ಮಾಡುತ್ತಿದ್ದಾರೆ. ಏಕೆಂದರೆ, ಅವರು ಏನೂ ಮಾಡಲಿಲ್ಲವಲ್ಲ. ಅದಕ್ಕೋಸ್ಕರ ವಿರೋಧ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿಯ ಆರ್. ಅಶೋಕ್ ಹಾಗೂ ಸುನೀಲ್ ಕುಮಾರ್ ಅವರು ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿದೆ, ಆರ್ಥಿಕತೆ ಕುಸಿದಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾಲ್ಕು ವರ್ಷದಲ್ಲಿ ಅವರು ಏನು ಮಾಡಿದರು. 2018ರಲ್ಲಿ ಅವರು 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ ಶೇ.10 ರಷ್ಟು ಭರವಸೆಗಳನ್ನು ಈಡೇರಿಸಲು ಅವರಿಗೆ ಸಾಧ್ಯವಾಗಿಲ್ಲ. ಇದು ಅವರ ಪರಿಸ್ಥಿತಿ. ನಮ್ಮನ್ನು ಟೀಕಿಸುವುದಕ್ಕೆ ಅವರಿಗೆ ಏನು ನೈತಿಕತೆ ಇದೆ?. ನಾವು ಎರಡೂವರೆ ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದವುಗಳನ್ನೂ ಈಡೇರಿಸಲು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಬಿ.ವೈ.ರಾಘವೇಂದ್ರ ಅವರು ವಚನ ಭ್ರಷ್ಟ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಸಿಎಂ, ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಅಂತಾ ತಿಳಿಸಿದ್ದೇನೆ. ಆದರೂ ನೀವು ಪುನಃ ಪುನಃ ಅದನ್ನೇ ಏಕೆ ಕೇಳುತ್ತೀರಿ ಎಂದು ಮರು ಪ್ರಶ್ನಿಸಿದರು. ಶ್ರಮಕ್ಕೆ ಫಲ ಸಿಗುತ್ತೆ ಎಂಬ ಡಿಕೆಶಿ ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ಟ್ವೀಟ್ ಮಾಡ್ತಾ, ಹೈಕಮಾಂಡ್ ಹೇಳಲಿ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶ್ರೀ ಸಬ್ಬಮ್ಮ ನೆಲೆಯ ಮಲೆನಾಡಿನಾದ್ಯಂತ ಸುಗ್ಗಿ ಉತ್ಸವ ಶುರು

ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…

3 mins ago

ಚಾಮರಾಜನಗರದಲ್ಲಿ ನೀರಿನ ಸಮಸ್ಯೆ ಮುಂದೆ ಇನ್ನೂ ಉಲ್ಭಣ!

ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…

9 mins ago

ಚಂದಿರನತ್ತ ಮಾನವ: ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿ

ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…

21 mins ago

ಹಿಂದಿ ಕಡ್ಡಾಯ ಕಲಿಕೆ: ದೇಶ ಒಡೆಯಲು ಪೀಠಿಕೆ!

ಟಿ.ಎ.ನಾರಾಯಣಗೌಡ ಹಿಂದಿ ರಾಷ್ಟ್ರ ಭಾಷೆ/ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ. ಆದರೆ, ಹಿಂದಿ ರಾಷ್ಟ್ರ ಭಾಷೆಯಲ್ಲ, ಇದನ್ನು…

48 mins ago

ಓದುಗರ ಪತ್ರ: ಅಂಕಗಳನ್ನು ಹೋಲಿಸಿ ಆತ್ಮಸ್ಥೈರ್ಯವನ್ನು ಕುಗ್ಗಿಸದಿರಿ

ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷಾ…

55 mins ago

ಓದುಗರ ಪತ್ರ: ಬೇಸಿಗೆ ರಜೆ ಅರ್ಥಪೂರ್ಣವಾಗಿರಲಿ

೨೦೨೫-೨೬ರ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ಇದೇ ಏಪ್ರಿಲ್ ೧೧ರಿಂದ ಮೇ ೨೮ರವರೆಗೆ ಸರ್ಕಾರ ಬೇಸಿಗೆ ರಜೆಯನ್ನು ಮಕ್ಕಳಿಗೆ ನೀಡಿದೆ.…

1 hour ago