ರಾಜ್ಯ

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ

ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ ದಿನ ಪೂರೈಸಿದ್ದು, ಇದೇನು ಮೈಲಿಗಲ್ಲಲ್ಲ. ಬಡವರಿಗೆ, ದಲಿತರಿಗೆ, ಹಿಂದುಳಿದ ವರ್ಗದವರಿಗೆ, ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಇದನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದರು.

ಹಾವೇರಿಯಲ್ಲಿ ಶನಿವಾರ ಮಾತನಾಡಿದ ಅವರು, ಸಾಧನಾ ಸಮಾವೇಶಕ್ಕೆ ಬಿಜೆಪಿಯವರು ವಿರೋಧ ಮಾಡುತ್ತಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ ಬಿಜೆಪಿಯವರು ಹೊಟ್ಟೆ ಕಿಚ್ಚಿನಿಂದ ಹಾಗೆ ವಿರೋಧ ಮಾಡುತ್ತಿದ್ದಾರೆ. ಏಕೆಂದರೆ, ಅವರು ಏನೂ ಮಾಡಲಿಲ್ಲವಲ್ಲ. ಅದಕ್ಕೋಸ್ಕರ ವಿರೋಧ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿಯ ಆರ್. ಅಶೋಕ್ ಹಾಗೂ ಸುನೀಲ್ ಕುಮಾರ್ ಅವರು ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿದೆ, ಆರ್ಥಿಕತೆ ಕುಸಿದಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾಲ್ಕು ವರ್ಷದಲ್ಲಿ ಅವರು ಏನು ಮಾಡಿದರು. 2018ರಲ್ಲಿ ಅವರು 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ ಶೇ.10 ರಷ್ಟು ಭರವಸೆಗಳನ್ನು ಈಡೇರಿಸಲು ಅವರಿಗೆ ಸಾಧ್ಯವಾಗಿಲ್ಲ. ಇದು ಅವರ ಪರಿಸ್ಥಿತಿ. ನಮ್ಮನ್ನು ಟೀಕಿಸುವುದಕ್ಕೆ ಅವರಿಗೆ ಏನು ನೈತಿಕತೆ ಇದೆ?. ನಾವು ಎರಡೂವರೆ ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದವುಗಳನ್ನೂ ಈಡೇರಿಸಲು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಬಿ.ವೈ.ರಾಘವೇಂದ್ರ ಅವರು ವಚನ ಭ್ರಷ್ಟ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಸಿಎಂ, ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಅಂತಾ ತಿಳಿಸಿದ್ದೇನೆ. ಆದರೂ ನೀವು ಪುನಃ ಪುನಃ ಅದನ್ನೇ ಏಕೆ ಕೇಳುತ್ತೀರಿ ಎಂದು ಮರು ಪ್ರಶ್ನಿಸಿದರು. ಶ್ರಮಕ್ಕೆ ಫಲ ಸಿಗುತ್ತೆ ಎಂಬ ಡಿಕೆಶಿ ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ಟ್ವೀಟ್ ಮಾಡ್ತಾ, ಹೈಕಮಾಂಡ್ ಹೇಳಲಿ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನ.26ಕ್ಕೆ ಮೈಸೂರಿನಲ್ಲಿ ಸಂವಿಧಾನ ದಿನಾಚರಣೆ: ಕಾಂಗ್ರೆಸ್‌ ಹೈಕಮಾಂಡ್‌ ನಾಯಕರಿಗೆ ಆಹ್ವಾನ!

ನವದೆಹಲಿ: ನವೆಂಬರ್‌ 26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಹೈಕಮಾಂಡ್‌…

59 mins ago

ಮಲೆ ಮಹದೇಶ್ವರ ಬೆಟ್ಟದ ರಾಜ್ಯ ಹೆದ್ದಾರಿಯಲ್ಲಿ ಅಕ್ರಮ ಶುಲ್ಕ ವಸೂಲಿ ಖಂಡಿಸಿ ರೈತರ ಬೃಹತ್ ಪ್ರತಿಭಟನೆ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಶುಲ್ಕ ವಸೂಲಿ ಮಾಡುತ್ತಿರುವುದನ್ನು…

2 hours ago

ಸೌಜನ್ಯ ಪ್ರಕರಣ: ಸುಪ್ರೀಂ ಸೂಚನೆಯಂತೆ ಮೂವರು ವೈದ್ಯರ ಮೆಡಿಕಲ್‌ ಬೋರ್ಡ್‌ ರಚನೆ!

ದಕ್ಷಿಣ ಕನ್ನಡ: ಸೌಜನ್ಯ ಪ್ರಕರಣದ ತನಿಖೆಯಲ್ಲಿ ಎಸ್‌ಐಟಿ ಮತ್ತೊಂದು ಹೆಜ್ಜೆ ಇಟ್ಟಿದೆ. ಸುಪ್ರೀಂ ಕೋರ್ಟ್‌ ಆದೇಶದಂತೆ ಮೂವರು FSL ವೈದ್ಯರನ್ನೊಳಗೊಂಡ…

3 hours ago

‘ನಾವೆಲ್ಲರೂ ಸ್ನೇಹಿತರು, ಭಾರತೀಯರು’: ವಿಜಯ್‌ ಭೇಟಿ ಬಗ್ಗೆ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ‘ನಾವೆಲ್ಲರೂ ಸ್ನೇಹಿತರು, ನಾವೆಲ್ಲರೂ ಭಾರತೀಯರು’ ಎಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್‌ ಜೊತೆಗಿನ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.…

3 hours ago

ಖಾಸಗಿ ಆಸ್ಪತ್ರೆಗಳೇ ಗಮನಿಸಿ: ಚಿಕಿತ್ಸಾ ದರಪಟ್ಟಿ ಹಾಕದಿದ್ದರೆ ಕ್ರಮ!

ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಯಾವ ಚಿಕಿತ್ಸೆಗೆ ಎಷ್ಟು ಖರ್ಚು? ಈ ಮಾಹಿತಿ ರೋಗಿಗಳಿಗೆ ಮೊದಲೇ ಸಿಗುವಂತೆ ಮಾಡಲು ಆರೋಗ್ಯ ಇಲಾಖೆ ಕಟ್ಟುನಿಟ್ಟಿನ…

5 hours ago

ಬೋನಿನ ಗೇಟ್ ತೆರೆಯುತ್ತಿದ್ದಂತೆ ಸಿಬ್ಬಂದಿ ಮೇಲೆ ದಾಳಿ ನಡೆಸಿ ಚಿರತೆ ಪರಾರಿ!

ಮೈಸೂರು: ತಾಲೂಕಿನ ಮರಸೆ ಗ್ರಾಮದಲ್ಲಿ ಸೆರೆಹಿಡಿದಿದ್ದ ಚಿರತೆಯೊಂದು ಅರಣ್ಯ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದು, ಈ ದೃಶ್ಯ ಮೊಬೈಲ್‌ನಲ್ಲಿ…

5 hours ago