ಬೆಂಗಳೂರು: ನಾವು ಜೆಡಿಎಸ್ ಶಾಸಕರನ್ನು ಕೊಂಡುಕೊಳ್ಳುವ ಕೆಲಸಕ್ಕೆ ಕೈಹಾಕಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಗಡಿಗೆ ಹೋಗಿ ಯಾವುದೇ ಪದಾರ್ಥದ ಬೆಲೆ ಎಷ್ಟು ಅಂತ ಕೇಳಿದಾಗ ಅವರು ಬೆಲೆ ಹೇಳುತ್ತಾರೆ. ಆದರೆ ಈ ರೀತಿ ನಾವೇನೂ ಜೆಡಿಎಸ್‌ನವರ ಬಳಿ ಹೋಗಿ ಕೇಳಲಿಲ್ಲ ಎಂದರು.
ಇನ್ನು ಸಿ.ಪಿ.ಯೋಗೇಶ್ವರ್ ಹೇಳಿಕೆಯಿಂದ ಜೆಡಿಎಸ್ ನಾಯಕರು ಒಗ್ಗಟ್ಟು ಪ್ರದರ್ಶನ ಮಾಡುತ್ತಿದ್ದಾರೆ. ಸಿಪಿವೈ ಹೇಳಿಕೆಯಿಂದ ಜೆಡಿಎಸ್‌ನವರು ಹೆದರುವ ಅವಶ್ಯಕತೆಯಿಲ್ಲ. ನಾವು ಅವರನ್ನು ಕೊಂಡುಕೊಳ್ಳಲು ಹೋಗಲ್ಲ. ಯೋಗೇಶ್ವರ್ ಹಾಗೆ ಸುಮ್ಮನೆ ಹೇಳಿಕೆ ನೀಡಿದ್ದಾರೆ ಅಷ್ಟೇ. ಆ ಹೇಳಿಕೆಯನ್ನೇ ಜೆಡಿಎಸ್‌ನವರು ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಲೇವಡಿ ಮಾಡಿದರು.
ಇನ್ನು ಸಂಪುಟ ಪುನರ್‌ರಚನೆ ಸಂಬಂಧ ಮಾತನಾಡಿದ ಅವರು, ಸಂಪುಟ ಪುನರ್ ರಚನೆ ಬಗ್ಗೆ ನನಗೆ ಗೊತ್ತಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಹೋಗಿದ್ದಾರೆ. ಖಾತೆ ಬದಲಾವಣೆ ಬಗ್ಗೆ ಏನು ತೀರ್ಮಾನ ಮಾಡುತ್ತಾರೋ ಆ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ಏನು ಜವಾಬ್ದಾರಿ ಕೊಟ್ಟಿದ್ದಾರೋ ಅದನ್ನು ಮಾಡಿಕೊಂಡು ಬಂದಿದ್ದೇನೆ ಎಂದರು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…