r ashok
ಬೆಂಗಳೂರು : ಈ ಬಾರಿಯ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ಯಶಸ್ವಿಯಾಗಿ ಚರ್ಚೆ ಮಾಡಿದ್ದೇವೆ. ಬಿಜೆಪಿ-ಜೆಡಿಎಸ್‌ನಿಂದ ಉತ್ತಮ ಹೋರಾಟ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲಿ ಬಿಜೆಪಿ-ಜೆಡಿಎಸ್‌ನ ಎಲ್ಲ ಶಾಸಕರು ಒಗ್ಗಟ್ಟಾಗಿ ಹಾಲು ಜೇನಿನಂತೆ ಕೆಲಸ ಮಾಡಿದ್ದಾರೆ. ಸರ್ಕಾರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರಿಗೆ ಎಲ್ಲರೂ ಸರಿಯಾದ ಪ್ರಶ್ನೆಗಳನ್ನು ಕೇಳಿದ್ದಾರೆ. ಆರ್‌ಸಿಬಿ ಸಂಭ್ರಮಾಚರಣೆಯ ಕಾಲ್ತುಳಿತ ದುರಂತದ ಬಗ್ಗೆ ಗೃಹ ಸಚಿವರ ಜೊತೆಗೆ ಮುಖ್ಯಮಂತ್ರಿ ಕೂಡ ಉತ್ತರ ಕೊಡುವಂತೆ ಮಾಡಿದ್ದೇವೆ. ಎರಡು ವರ್ಷಗಳಲ್ಲಿ ಅಭಿವೃದ್ಧಿ ಶೂನ್ಯ ಹಾಗೂ ಸರ್ಕಾರ ಪಾಪರ್ ಆಗಿರುವ ಬಗ್ಗೆ ಕೇಳಿದ್ದಕ್ಕೆ ಸಿಎಂ, ಡಿಸಿಎಂ ಇಬ್ಬರೂ ಉತ್ತರ ನೀಡಿದ್ದಾರೆ ಎಂದರು.
ಧರ್ಮಸ್ಥಳ ವಿಚಾರದಲ್ಲಿ ನಡೆದ ಘಟನೆಗಳ ಬಗ್ಗೆ ಹೋರಾಟ ಮಾಡಿದ್ದರಿಂದ ಅಗೆಯುವುದು ಸ್ಥಗಿತಗೊಂಡಿದೆ. ದುಂದು ವೆಚ್ಚಕ್ಕೆ ಕಡಿವಾಣ ಬಿದ್ದು, ಮುಸುಕುಧಾರಿಯ ಬಣ್ಣ ಬಯಲಾಗಿದೆ. ಸುಜಾತ ಭಟ್ ವಿಚಾರ ಕೂಡ ಬಯಲಾಗಿದೆ. ಇಡೀ ಪ್ರಕರಣದ ಚಿತ್ರಣವನ್ನೇ ನಮ್ಮ ಶಾಸಕರು ಬದಲಾಯಿಸಿದ್ದಾರೆ ಎಂದರು.
ಸರ್ಕಾರಿ ಶಾಲೆಗಳ ಪರಿಸ್ಥಿತಿ, ರಸಗೊಬ್ಬರ ಹಂಚಿಕೆಯಲ್ಲಿ ಅವ್ಯವಹಾರ, ರಸ್ತೆ ಗುಂಡಿಗಳ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದೇವೆ. ರಾಜ್ಯದಲ್ಲಿ ಮಳೆ ಹಾನಿಯಾಗಿದ್ದು, ನಮ್ಮಲ್ಲಿನ ಸಂತ್ರಸ್ತರಿಗೆ 95 ಸಾವಿರ ರೂ. ಹಾಗೂ ಕೇರಳಕ್ಕೆ 10 ಲಕ್ಷ ರೂ. ನೀಡಲಾಗಿದೆ. ಈ ತಾರತಮ್ಯದ ಬಗ್ಗೆಯೂ ಚಾಟಿ ಬೀಸಿದ್ದೇವೆ. ಸರ್ಕಾರದ 10 ಕೋಟಿ ರೂ. ಹಣದಲ್ಲಿ ಕಾಂಗ್ರೆಸ್ ಸಮಾವೇಶ ಮಾಡಲಾಗಿದೆ. ಈ ಬಗ್ಗೆಯೂ ಪ್ರಶ್ನೆ ಮಾಡಿ, ಕಿವಿ ಹಿಂಡುವ ಕೆಲಸ ಮಾಡಿದ್ದೇವೆ. ಇನ್ನು ಮುಂದೆ ರೈತರ ಪರ ಹಾಗೂ ಸಾಮಾನ್ಯ ಜನರ ಪರ ಕೆಲಸ ಮಾಡಿ ಎಂದು ಆಗ್ರಹಿಸಿದ್ದೇವೆ ಎಂದು ತಿಳಿಸಿದರು.
ಒಳಮೀಸಲಾತಿ ವಿಚಾರಕ್ಕೆ ಬಿಜೆಪಿಯಿಂದ ಹೋರಾಟ ನಡೆದಿತ್ತು. ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಇದಕ್ಕೆ ಚಾಲನೆ ನೀಡಿದ್ದರು. ಈಗಿನ ಸರ್ಕಾರ ಅದಕ್ಕೆ ಸುಣ್ಣ ಬಣ್ಣ ಬಳಿದು ಸದನದಲ್ಲಿ ಮಂಡಿಸಿದೆ. ಆದರೆ ಚರ್ಚೆಗೆ ಅವಕಾಶ ನೀಡದೆ ಸಿಎಂ ಸಿದ್ದರಾಮಯ್ಯ ಪಲಾಯನ ಮಾಡಿದ್ದಾರೆ ಎಂದು ದೂರಿದರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…