ರಾಜ್ಯ

ಜನಪರ ಕೆಲಸ ಮಾಡಲು ಕಾಂಗ್ರೆಸ್‌ಗೆ ಆಗ್ರಹಿಸಿದ್ದೇವೆ : ಪ್ರತಿಪಕ್ಷ ನಾಯಕ ಅಶೋಕ

ಬೆಂಗಳೂರು : ಈ ಬಾರಿಯ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ಯಶಸ್ವಿಯಾಗಿ ಚರ್ಚೆ ಮಾಡಿದ್ದೇವೆ. ಬಿಜೆಪಿ-ಜೆಡಿಎಸ್‌ನಿಂದ ಉತ್ತಮ ಹೋರಾಟ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲಿ ಬಿಜೆಪಿ-ಜೆಡಿಎಸ್‌ನ ಎಲ್ಲ ಶಾಸಕರು ಒಗ್ಗಟ್ಟಾಗಿ ಹಾಲು ಜೇನಿನಂತೆ ಕೆಲಸ ಮಾಡಿದ್ದಾರೆ. ಸರ್ಕಾರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರಿಗೆ ಎಲ್ಲರೂ ಸರಿಯಾದ ಪ್ರಶ್ನೆಗಳನ್ನು ಕೇಳಿದ್ದಾರೆ. ಆರ್‌ಸಿಬಿ ಸಂಭ್ರಮಾಚರಣೆಯ ಕಾಲ್ತುಳಿತ ದುರಂತದ ಬಗ್ಗೆ ಗೃಹ ಸಚಿವರ ಜೊತೆಗೆ ಮುಖ್ಯಮಂತ್ರಿ ಕೂಡ ಉತ್ತರ ಕೊಡುವಂತೆ ಮಾಡಿದ್ದೇವೆ. ಎರಡು ವರ್ಷಗಳಲ್ಲಿ ಅಭಿವೃದ್ಧಿ ಶೂನ್ಯ ಹಾಗೂ ಸರ್ಕಾರ ಪಾಪರ್‌ ಆಗಿರುವ ಬಗ್ಗೆ ಕೇಳಿದ್ದಕ್ಕೆ ಸಿಎಂ, ಡಿಸಿಎಂ ಇಬ್ಬರೂ ಉತ್ತರ ನೀಡಿದ್ದಾರೆ ಎಂದರು.

ಧರ್ಮಸ್ಥಳ ವಿಚಾರದಲ್ಲಿ ನಡೆದ ಘಟನೆಗಳ ಬಗ್ಗೆ ಹೋರಾಟ ಮಾಡಿದ್ದರಿಂದ ಅಗೆಯುವುದು ಸ್ಥಗಿತಗೊಂಡಿದೆ. ದುಂದು ವೆಚ್ಚಕ್ಕೆ ಕಡಿವಾಣ ಬಿದ್ದು, ಮುಸುಕುಧಾರಿಯ ಬಣ್ಣ ಬಯಲಾಗಿದೆ. ಸುಜಾತ ಭಟ್‌ ವಿಚಾರ ಕೂಡ ಬಯಲಾಗಿದೆ. ಇಡೀ ಪ್ರಕರಣದ ಚಿತ್ರಣವನ್ನೇ ನಮ್ಮ ಶಾಸಕರು ಬದಲಾಯಿಸಿದ್ದಾರೆ ಎಂದರು.

ಸರ್ಕಾರಿ ಶಾಲೆಗಳ ಪರಿಸ್ಥಿತಿ, ರಸಗೊಬ್ಬರ ಹಂಚಿಕೆಯಲ್ಲಿ ಅವ್ಯವಹಾರ, ರಸ್ತೆ ಗುಂಡಿಗಳ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದೇವೆ. ರಾಜ್ಯದಲ್ಲಿ ಮಳೆ ಹಾನಿಯಾಗಿದ್ದು, ನಮ್ಮಲ್ಲಿನ ಸಂತ್ರಸ್ತರಿಗೆ 95 ಸಾವಿರ ರೂ. ಹಾಗೂ ಕೇರಳಕ್ಕೆ 10 ಲಕ್ಷ ರೂ. ನೀಡಲಾಗಿದೆ. ಈ ತಾರತಮ್ಯದ ಬಗ್ಗೆಯೂ ಚಾಟಿ ಬೀಸಿದ್ದೇವೆ. ಸರ್ಕಾರದ 10 ಕೋಟಿ ರೂ. ಹಣದಲ್ಲಿ ಕಾಂಗ್ರೆಸ್‌ ಸಮಾವೇಶ ಮಾಡಲಾಗಿದೆ. ಈ ಬಗ್ಗೆಯೂ ಪ್ರಶ್ನೆ ಮಾಡಿ, ಕಿವಿ ಹಿಂಡುವ ಕೆಲಸ ಮಾಡಿದ್ದೇವೆ. ಇನ್ನು ಮುಂದೆ ರೈತರ ಪರ ಹಾಗೂ ಸಾಮಾನ್ಯ ಜನರ ಪರ ಕೆಲಸ ಮಾಡಿ ಎಂದು ಆಗ್ರಹಿಸಿದ್ದೇವೆ ಎಂದು ತಿಳಿಸಿದರು.

ಒಳಮೀಸಲಾತಿ ವಿಚಾರಕ್ಕೆ ಬಿಜೆಪಿಯಿಂದ ಹೋರಾಟ ನಡೆದಿತ್ತು. ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಇದಕ್ಕೆ ಚಾಲನೆ ನೀಡಿದ್ದರು. ಈಗಿನ ಸರ್ಕಾರ ಅದಕ್ಕೆ ಸುಣ್ಣ ಬಣ್ಣ ಬಳಿದು ಸದನದಲ್ಲಿ ಮಂಡಿಸಿದೆ. ಆದರೆ ಚರ್ಚೆಗೆ ಅವಕಾಶ ನೀಡದೆ ಸಿಎಂ ಸಿದ್ದರಾಮಯ್ಯ ಪಲಾಯನ ಮಾಡಿದ್ದಾರೆ ಎಂದು ದೂರಿದರು.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

5 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

5 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

5 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

7 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

9 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

14 hours ago