ರಾಜ್ಯ

ಟಿಕೆಟ್ ನೀಡುವ ವ್ಯತ್ಯಾಸದಿಂದಲೇ ಬಿಜೆಪಿ ಸೋಲು; ಕೇಂದ್ರದ ಕಡೆ ಬೊಟ್ಟು ಮಾಡಿದ ಯಡಿಯೂರಪ್ಪ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಾವು ಇನ್ನೂ ಎರಡರಿಂದ ಮೂರು ಕ್ಷೇತ್ರ ಗೆಲ್ಲಬಹುದಿತ್ತು. ಆದರೆ ಟಿಕೆಟ್ ನೀಡುವಲ್ಲಿ ವ್ಯತ್ಯಾಸವಾಯಿತು ಎಂದು ಮಾಜಿ ಸಿಎಂ ಯಡಿಯೂರಪ್ಪ ಕೇಂದ್ರದ ಕಡೆ ಬೊಟ್ಟು ಮಾಡಿ ತೋರಿಸಿದ್ದಾರೆ.

ಲೋಕಸಭಾ ಚುನಾವಣೆಯ ಫಲಿತಾಂಶ ಬಂದು ಇನ್ನೇನು 20 ದಿನಗಳೇ ಕಳೆಯುತ್ತಾ ಬಂದಿವೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ 19 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಸಹಕಾರಿಯಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಾಜ್ಯದಲ್ಲಿ 19 ಕ್ಷೇತ್ರಗಳನ್ನು ಗೆದ್ದು ಬೀಗಿದ್ದು, ಕಾಂಗ್ರೆಸ್ ಕೇವಲ 9 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಆದರೆ ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಹಲವು ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಂಡು ಭಾರೀ ನಿರಾಸೆಗೊಂಡಿದೆ.

ಹೀಗಿರುವಾಗಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಸೋಲಿನ ಬಗ್ಗೆ ಅಸಮಾಧಾನ ಹೊರಹಾಕಿದ್ದು, ನಾವು ಲೋಕಸಭಾ ಚುನಾವಣೆಯಲ್ಲಿ ಇನ್ನು 2-3 ಕ್ಷೇತ್ರಗಳನ್ನು ಗೆಲ್ಲಬಹುದಿತ್ತು. ಆದರೆ ಟಿಕೆಟ್ ಹಂಚಿಕೆಯಲ್ಲಿ ಭಾರೀ ವ್ಯತ್ಯಾಸವಾಯಿತು. ಕೇಂದ್ರ ಸರ್ಕಾರ ಸರಿಯಾದ ಸಮಯಕ್ಕೆ ಟಿಕೆಟ್ ನೀಡಿದ್ದರೆ ಇನ್ನೂ 3 ಕ್ಷೇತ್ರಗಳನ್ನು ಗೆಲ್ಲುತ್ತಿದ್ದೆವು ಎಂದು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿ ತೋರಿಸಿದ್ದಾರೆ.

andolana

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

3 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

3 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

5 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

5 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

6 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

7 hours ago