ಬೆಂಗಳೂರು: ಯಾರೇ ತಪ್ಪು ಮಾಡಿದ್ದರೂ ಕಾನೂನಿನ ಪ್ರಕಾರವೇ ಶಿಕ್ಷೆಯಾಗಲಿದೆ.ಲೋಕಾಯುಕ್ತ ಸರ್ವ ಸ್ವತಂತ್ರವಾಗಿ ಕೆಲಸ ಮಾಡಲಿ. ನಾವು ಯಾರನ್ನೂ ಕೂಡಾ ರಕ್ಷಣೆ ಮಡುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುವಂತಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಕಚೇರಿ ಮತ್ತು ನಿವಾಸದ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು. ನಾವು ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿರೋದೇ ಭ್ರಷ್ಟಾಚಾರ ತಡೆಯೋಕೆ. ಹಿಂದೆ ಲೋಕಾಯುಕ್ತ ಇಲ್ಲದೇ ಕಾಂಗ್ರೆಸ್ ಕಾಲದ ಕೇಸ್ ಗಳು ಮುಚ್ಚಿಹೋಯ್ತು. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ, ನಮ್ಮ ಸರ್ಕಾರ ಯಾರನ್ನೂ ರಕ್ಷಿಸಲು ಹೋಗುವುದಿಲ್ಲ ಎಂದರು.
ಶಾಸಕರ ಪುತ್ರನ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ, ನಾವು ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಎಸಿಬಿ ರಚಿಸಿ ಲೋಕಾಯುಕ್ತ ಹಲ್ಲು ಕೀಳುವ ಪ್ರಯತ್ನ ನಾವು ಮಾಡಿಲ್ಲ, ಅದನ್ನು ಮಾಡಿರುವುದು ಕಾಂಗ್ರೆಸ್. ಲೋಕಾಯುಕ್ತಕ್ಕೆ ಸಂಪೂರ್ಣ ಮುಕ್ತ ಅಧಿಕಾರ ನೀಡುವ ಮರು ಆದೇಶ ನೀಡಿ ಲೋಕಾಯುಕ್ತವನ್ನು ಮರುಸ್ಥಾಪಿಸಿದ್ದೇ ಬಿಜೆಪಿ ಸರ್ಕಾರ. ಲೋಕಾಯುಕ್ತ ಇರುವುದೇ ಇಂತಹ ಭ್ರಷ್ಟಾಚಾರ ನಿಗ್ರಹಕ್ಕೆ, ಅದು ಸರ್ವಸ್ವತಂತ್ರವಾಗಿದೆ. ಲೋಕಾಯುಕ್ತ ಮುಕ್ತವಾಗಿ ಸಮಗ್ರ ತನಿಖೆ ನಡೆಸಲಿ, ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ, ಇದರಲ್ಲಿ ಸಮಗ್ರ ತನಿಖೆಯಾಗಲಿದೆ ಎಂದು ಹೇಳಿದ್ದಾರೆ.
ಮುಕ್ತವಾಗಿ ತನಿಖೆ ನಡೆದು ಹಣ ಯಾರಿಗೆ ಸೇರಿದೆ ಎನ್ನುವ ಮಾಹಿತಿ ಹೊರಗೆ ಬರಲಿ, ಸತ್ಯ ಜನರಿಗೆ ತಿಳಿದು ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಹಿಂದೆ ಕಾಂಗ್ರೆಸ್ ಸರ್ಕಾರದ ಅಧಿಕಾರವಧಿಯಲ್ಲಿ ಇಂತಹ ಹತ್ತಾರು ಪ್ರಕರಣಗಳು ನಡೆದಿವೆ ಮತ್ತು ಅಲ್ಲಲ್ಲೇ ಮುಚ್ಚಿಹೋಗಿವೆ. ಇಂದು ಬಿಜೆಪಿ ವಿರುದ್ಧ ಇನ್ನಿಲ್ಲದ ಆರೋಪವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಅಂದು ಎಸಿಬಿ ರಚಿಸಿ ಇಂತಹ ಪ್ರಕರಣಗಳನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದೇ ಕಾಂಗ್ರೆಸ್ ನವರು, ಹೀಗಾಗಿ ಇಂದು ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಅವರಿಗೆಲ್ಲಿದೆ ಎಂದು ಕೇಳಿದರು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಅವರ ಕಾಲದ ಹಗರಣಗಳನ್ನ ತನಿಖೆ ಮಾಡಲಿ. ಲೋಕಾಯುಕ್ತ ಇರುವುದೇ ಭ್ರಷ್ಟಾಚಾರ ನಿಯಂತ್ರಣ ಮಾಡೋಕೆ. ಯಾವ್ಯಾವ ಹಗರಣ ಇದೆ ಎಲ್ಲಾ ತನಿಖೆಯಾಗುತ್ತೆ. ನಾವು ಯಾರನ್ನೂ ರಕ್ಷಣೆ ಮಾಡಲ್ಲ ಎಂದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.