Mysore
29
light rain

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ನಾವು ಗೋಡ್ಸೆಗಳನ್ನು ಸಹಿಸಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗೋಡ್ಸೆಗಳನ್ನು ನಾವು ಸಹಿಸಬಾರದು. ಗಾಂಧಿಯ ಬಗ್ಗೆ ಸುಳ್ಳು ಪ್ರಚಾರ ಮಾಡಿ ಗೋಡ್ಸೆಯಂಥಾ ಖಳನಾಯಕರನ್ನು ಪೂಜಿಸುವ ದುಷ್ಟ ಶಕ್ತಿಗಳನ್ನು ನಾವು ಸೋಲಿಸಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ‌ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

ನಾನು ಮೊದಲ ಬಾರಿ ಮುಖ್ಯಮಂತ್ರಿ ಆದ ಬಳಿಕ 2014 ರಲ್ಲಿ ಮಹಾತ್ಮಗಾಂಧಿ ಸೇವಾ ಪ್ರಶಸ್ತಿಯನ್ನು ಆರಂಭಿಸಿದೆ. ಗಾಂಧಿ ತತ್ವಗಳನ್ನು ಅನುಸರಿಸುತ್ತಾ, ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯ ಕಲಿಸುತ್ತಿರುವ ಅತ್ಯಂತ ಅರ್ಹರು ಈ ಬಾರಿಯ ಗಾಂಧಿ ಸೇವಾ ಪ್ರಶಸ್ತಿ ಪಡೆದಿದ್ದಾರೆ ಎಂದು ಶ್ಲಾಘಿಸಿದರು.

ಶಿಕ್ಷಣ ಪಡೆದವರೆಲ್ಲಾ ಮಾನವೀಯತೆ ಇರುವವರು ಎಂದು ಹೇಳಲಾಗುವುದಿಲ್ಲ. ಶಿಕ್ಷಣ ಮನುಷ್ಯರನ್ನು ಮಾನವೀಯಗೊಳಿಸಬೇಕು. ಇಲ್ಲದಿದ್ದರೆ ಅಂತಹ ಶಿಕ್ಷಣಕ್ಕೆ ಮೌಲ್ಯ ಇರುವುದಿಲ್ಲ ಎಂದರು.

ಶಿಕ್ಚಣ ಪಡೆದವರು ಸಮಾಜದ ಆಸ್ತಿ ಆಗಬೇಕು. ಸಮಾಜದ ವಿರೋಧಿ ಆಗಬಾರದು. ಗಾಂಧೀಜಿ ಅವರ ಬದುಕೇ ಸಂದೇಶವಾಗಿತ್ತು. ಸಮಾಜದ ಬದಲಾವಣೆಗಾಗಿ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು. ಹೀಗಾಗಿ ಇವರ ವಿಚಾರಗಳು ಎಂದೆಂದಿಗೂ ಶಾಶ್ವತ ಎಂದರು.

ಗಾಂಧಿಯವರನ್ನು ದೈಹಿಕವಾಗಿ ಕೊಲ್ಲಬಹುದು. ಆದರೆ ಅವರ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲ.

ನಾವು ಗೋಡ್ಸೆ ಭಾರತವನ್ನು ನಿರ್ಮಿಸಲು ಹೊರಟಿರುವವರನ್ನು ಸೋಲಿಸಬೇಕು. ನಾವು ಗಾಂಧಿ ಭಾರತವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಕರೆ ನೀಡಿದರು.

 

Tags: