ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯದ ಉದ್ದಗಲಕ್ಕೂ ಓಡಾಡಿ ಹೊಸ ಪಕ್ಷ ಕಟ್ಟಬೇಕು. ಮಹಿಳಾ ಸಮಾವೇಶ ನಡೆಸಬೇಕು ಎಂದು ಜೆಡಿಎಸ್ ಮುಖ್ಯಸ್ಥ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಇಂದು ಪಕ್ಷದ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣಕ್ಕೆ ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ನಾವೂ ಕೂಡ ಅದನ್ನು ಮಾದರಿಯಾಗಿ ತೆಗೆದುಕೊಂಡು ಮಹಿಳೆಯರನ್ನೊಳಗೊಂಡ ಪಕ್ಷ ಕಟ್ಟುವಲ್ಲಿ ಯೋಜನೆಗಳನ್ನು ರೂಪಿಸಬೇಕು ಎಂದರು.
ನಿಖಿಲ್ ಕುಮಾರಸ್ವಾಮಿ ಅವರಿಗೆ ಹೊಸ ಜವಬ್ದಾರಿ ನೀಡಲಾಗಿದ್ದು, ಪಕ್ಷದ ವತಿಯಿಂದ ಕನಷ್ಠ 50ಮಹಿಳಾ ಸಮಾವೇಶಗಳನ್ನು ನಡೆಸಬೇಕು. ಮುಂದಿನ ಚುನಾವಣೆಗಳಲ್ಲಿ ಪಕ್ಷದಿಂದ 80 ಮಹಿಳೆಯರು ಚುನಾವಣೆಗೆ ನಿಲ್ಲಬೇಕು ಎಂದು ತಿಳಿಸಿದರು.