ರಾಜ್ಯ

ರಾಜ್ಯದ ಉದ್ದಗಲಕ್ಕೂ ಓಡಾಡಿ ಹೊಸ ಪಕ್ಷ ಕಟ್ಟಬೇಕು: ಹೆಚ್‌.ಡಿ.ದೇವೇಗೌಡ

ಬೆಂಗಳೂರು: ನಿಖಿಲ್‌ ಕುಮಾರಸ್ವಾಮಿ ಅವರು ರಾಜ್ಯದ ಉದ್ದಗಲಕ್ಕೂ ಓಡಾಡಿ ಹೊಸ ಪಕ್ಷ ಕಟ್ಟಬೇಕು. ಮಹಿಳಾ ಸಮಾವೇಶ ನಡೆಸಬೇಕು ಎಂದು ಜೆಡಿಎಸ್‌ ಮುಖ್ಯಸ್ಥ ಹೆಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಇಂದು ಪಕ್ಷದ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣಕ್ಕೆ ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ನಾವೂ ಕೂಡ ಅದನ್ನು ಮಾದರಿಯಾಗಿ ತೆಗೆದುಕೊಂಡು ಮಹಿಳೆಯರನ್ನೊಳಗೊಂಡ ಪಕ್ಷ ಕಟ್ಟುವಲ್ಲಿ ಯೋಜನೆಗಳನ್ನು ರೂಪಿಸಬೇಕು ಎಂದರು.

ನಿಖಿಲ್‌ ಕುಮಾರಸ್ವಾಮಿ ಅವರಿಗೆ ಹೊಸ ಜವಬ್ದಾರಿ ನೀಡಲಾಗಿದ್ದು, ಪಕ್ಷದ ವತಿಯಿಂದ ಕನಷ್ಠ 50ಮಹಿಳಾ ಸಮಾವೇಶಗಳನ್ನು ನಡೆಸಬೇಕು. ಮುಂದಿನ ಚುನಾವಣೆಗಳಲ್ಲಿ ಪಕ್ಷದಿಂದ 80 ಮಹಿಳೆಯರು ಚುನಾವಣೆಗೆ ನಿಲ್ಲಬೇಕು ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

7 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

7 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

7 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

8 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

8 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago