ರಾಜ್ಯ

ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದಲ್ಲಿ ಎಲ್ಲರೂ ಸೇರಿ ಚರ್ಚೆ ಮಾಡುತ್ತೇವೆ: ಎಚ್.ಡಿ.ದೇವೇಗೌಡ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿಗಳ ಚುನಾವಣೆಗಳಲ್ಲಿ ಎನ್‌ಡಿಎ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಅಭಿಲಾಷೆ ಇದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದರು.

ಜೆ.ಪಿ.ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮದು ಪ್ರಾದೇಶಿಕ ಪಕ್ಷ. ಬಿಜೆಪಿ ರಾಷ್ಟ್ರೀಯ ಪಕ್ಷ. ಅವರು ಚುನಾವಣಾ ಪೂರ್ವ ಹೊಂದಾಣಿಕೆ ಕುರಿತಂತೆ ಯಾವ ತೀರ್ಮಾನ ಮಾಡಿದ್ದಾರೆ ಎಂದು ಕಾದುನೋಡೋಣ ಎಂದರು.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದಲ್ಲಿ ಎಲ್ಲರೂ ಸೇರಿ ಚರ್ಚೆ ಮಾಡುತ್ತೇವೆ. ಬಿಜೆಪಿಯ ಕೇಂದ್ರದ ನಾಯಕರೊಂದಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ಚರ್ಚೆ ಮಾಡುತ್ತಾರೆ ಎಂದ ಅವರು, ಸಿದ್ದರಾಮಯ್ಯ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ಕೊಡುವ ಅಗತ್ಯವಿಲ್ಲ ಎಂದು ಹೇಳಿದರು.

ಜೆಡಿಎಸ್‌‍ನಲ್ಲಿ ಕುಟುಂಬದವರನ್ನು ಹೊರತುಪಡಿಸಿ ಬೇರೆಯವರಿಗೆ ಹುದ್ದೆ ಕೊಡುವುದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನನಗೆ ಪ್ರತಿಯೊಂದು ನೆನಪಿನ ಶಕ್ತಿ ಇದೆ. ಪ್ರತಿಯೊಂದಕ್ಕೂ ಸಮಯ ಬಂದಾಗ ಪ್ರತಿಕ್ರಿಯಿಸುತ್ತೇನೆ ಎಂದರು.

ವಿಜಯಪುರದಲ್ಲಿ ಫೆ.27 ರಂದು ಜೆಡಿಎಸ್‌‍ ಸಮಾವೇಶ ನಡೆಸಲಾಗುತ್ತದೆ. ಈಗಾಗಲೇ ಅದರ ಪೂರ್ವ ಸಿದ್ಧತೆಗಳು ಪ್ರಾರಂಭವಾಗಿವೆ. ಆ ಸಮಾವೇಶದಲ್ಲಿ ಪಾಲ್ಗೊಳ್ಳಲು ನನಗೂ ಆಹ್ವಾನ ನೀಡಿದ್ದಾರೆ.

ರಾಜ್ಯಸಭೆಯಲ್ಲಿ ರಾಜ್ಯದ ನೀರಾವರಿ ವಿಚಾರ ಸೇರಿದಂತೆ ಏನು ಪ್ರಸ್ತಾಪ ಮಾಡಬೇಕೊ ಅದನ್ನು ಮಾಡುತ್ತೇನೆ. ನನ್ನ ರಾಜ್ಯಸಭಾ ಅವಧಿ ಮುಗಿದರೂ ಮಾಧ್ಯಮದವರನ್ನು ಭೇಟಿಯಾಗುತ್ತೇನೆ ಎಂದು ಅವರು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

3 hours ago

ಓದುಗರ ಪತ್ರ: ರಾಜರ ಯೋಜನೆ ಮಾದರಿಯಲ್ಲಿ ಗ್ರೇಟರ್ ಮೈಸೂರು ನಿರ್ಮಿಸಿ

ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…

3 hours ago

ಓದುಗರ ಪತ್ರ: ಸಿಗ್ನಲ್‌ನಲ್ಲಿ ವಾಹನಗಳ ಎಂಜಿನ್ ಆಫ್ ಮಾಡಿ

ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…

3 hours ago

ಓದುಗರ ಪತ್ರ: ಹುಂಡಿ ಹಣ ಸಮಾಜ ಸೇವಾ ಕಾರ್ಯಕ್ಕೆ ಬಳಕೆಯಾಗಲಿ

ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…

3 hours ago

ರಿಪೇರಿಯಾಗದ ಆಟೋ; ಬೀದಿಗೆ ಬೀಳುತ್ತಿದೆ ಕಸ

ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ  ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…

3 hours ago

ಮೈವಿವಿ ಪ್ರಸಾರಾಂಗ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

3 hours ago