ರಾಜ್ಯ

ಅವರ ರಾಜಕೀಯಕ್ಕೆ ರಾಜಕೀಯವಾಗಿಯೇ ಉತ್ತರಿಸುತ್ತೇವೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ರಾಜಕೀಯವಾಗಿ ಈ ಪ್ರಕರಣವನ್ನು ಬಳಸುತ್ತಿದ್ದಾರೆ, ನಾವೂ ರಾಜಕೀಯವಾಗಿ ಉತ್ತರಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಅದರ ವರದಿಯೇ ಬಂದಿಲ್ಲ. ಈಗಲೇ ತಮ್ಮ ಸಂವಿಧಾನಿಕ ಪವರ್ ನ್ನು ದುರುಪಯೋಗಪಡಿಸಿಕೊಂಡು ಈ ರೀತಿ ಮಾಡಲಾಗಿದೆ ಎಂದು ಆರೋಪಿಸಿದರು.

ಮುಂದೆ ಬಂಧನವಾದರೆ ರಾಜಿನಾಮೆ ನೀಡಬೇಕಾಗುತ್ತದೆಯಲ್ಲವೇ ಎನ್ನುವ ಪ್ರಶ್ನೆಗೆ, ಊಹಾಪೋಹದ ಪ್ರಶ್ನೆಗಳಿಗೆಲ್ಲ ನಾನು ಉತ್ತರಿಸುವುದಿಲ್ಲ. ರಾಷ್ಟ್ರದಲ್ಲಿ ಬಿಜೆಪಿಯೇತರ ಪಕ್ಷಗಳ ಸರಕಾರ ಬಂದಾಗಲೆಲ್ಲ ಈ ರೀತಿ ಕಾಡಿಸುವುದು ಹಿಂದಿನಿದಂಲೂ ನಡೆಯುತ್ತಲೇ ಇದೆ. ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ಮಂತ್ರಿಗಳೂ ಮುಖ್ಯಮಂತ್ರಿಗಳ ಬೆನ್ನಿಗೆ ನಿಂತಿದ್ದೇವೆ. ಅವರು ರಾಜಿನಾಮೆ ಕೊಡುವ ಪ್ರಶ್ನೆ ಇಲ್ಲ. ಅವರ ರಾಜಕೀಯಕ್ಕೆ ನಾವೂ ರಾಜಕೀಯವಾಗಿಯೇ ಉತ್ತರ ನೀಡುತ್ತೇವೆ ಎಂದು ಹೆಬ್ಬಾಳಕರ್ ತಿಳಿಸಿದರು.

ಅಂದಿನ ಯಡಿಯೂರಪ್ಪ ಪ್ರಕರಣಕ್ಕೂ ಇದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಆಗ ಬಿಜೆಪಿಯವರದ್ದೇ ಸರಕಾರವಿತ್ತು. ಅವರ ಪಕ್ಷದವರೇ ಅವರ ಬೆನ್ನಿಗೆ ಚೂರಿ ಹಾಕಿ ಜೈಲಿಗೆ ಕಳಿಸಿದ್ದಾರೆ. ಇದು ಆ ರೀತಿಯ ಪ್ರಕರಣವಲ್ಲ. ಈ ಪ್ರಕರಣದ ಕುರಿತು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಪಕ್ಷ ಶಿಸ್ತಿನ ಪಕ್ಷ. ರಾಜಕೀಯವಾಗಿ ಮುಖ್ಯಮಂತ್ರಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. 40 ವರ್ಷದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದವರು ಸಿದ್ದರಾಮಯ್ಯನವರು. ಅವರ ಮುಖಕಕ್ಕೆ ಮಸಿ ಬಳಿಯಲು ಹೋದವರ ಕೈಗೆ ಮೊದಲು ಮಸಿ ಬಳಿದಿದೆ. ಜನರು ಅವರನ್ನು ಕ್ಷಮಿಸುವುದಿಲ್ಲ. ಈ ರಾಜ್ಯದ ಜನರು 5 ವರ್ಷ ಸುಭದ್ರ ಆಡಳಿತ ನಡೆಸಲು ಆಶಿರ್ವಾದ ಮಾಡಿದ್ದಾರೆ. ನಾವು 5 ವರ್ಷ ಆಡಳಿತ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

38 mins ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

42 mins ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

45 mins ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

47 mins ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

49 mins ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

13 hours ago