Categories: ರಾಜ್ಯ

ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ: ಶಾಸಕ‌‌ ಬಾಲಕೃಷ್ಣ

ರಾಮನಗರ: ಪ್ರಭು ಶ್ರೀರಾಮ ಬಿಜೆಪಿಯ ಸ್ವತ್ತಲ್ಲ. ಅವರು ಸಮಾಜ ಸ್ವತ್ತು. ನಾವು ರಾಮನಗರದಲ್ಲಿ ರಾಮ ಮಂದಿರ ಕಟ್ಟುತ್ತೇವೆ ಎಂದು ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಜೊತೆಗೆ ರಾಮ ನಗರದಲ್ಲಿ ರಾಮೋತ್ಸವ ಮಾಡುತ್ತೇವೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಕೂಡಾ ಹೇಳಿದ್ದು, ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್‌ ಸಹಮತ ನೀಡಿದೆ.

ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಗೆ ಸಿದ್ದತೆಗಳು ನಡೆಯುತ್ತಿದ್ದರೇ, ಮತ್ತೊಂದೆಡೆ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳು ಕ್ರೆಡಿಟ್‌ ವಾರ್‌ ಆರಂಭಿಸಿವೆ. ಇದರ ನಡುವೆ ರಾಮಮಂದಿರ ಕಟ್ಟಲು ಕೈ ನಾಯಕರ ಚರ್ಚೆ ಮಾಡುತ್ತಿದ್ದು, ಇದಕ್ಕೆ ಪುಷ್ಠಿಯೆಂಬಂತೆ ರೇಷ್ಮೆ ನಗರಿ ರಾಮನಗರದಲ್ಲಿ ಬೃಹತ್ ರಾಮಮಂದಿರ‌ ಕಟ್ಟುವ ಚರ್ಚೆ ಬಿರುಸಾಗಿಯೇ ನಡೆಯುತ್ತಿದೆ.‌ ರಾಮನಗರದಲ್ಲಿ ರಾಮೋತ್ಸವ ಮಾಡುತ್ತೇವೆ ಅಂತ ಶಾಸಕ ಇಕ್ಬಾಲ್ ಹುಸೇನ್ ಹೇಳಿದರೆ, ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ, ರಾಮನಗರಲ್ಲಿ ಬೃಹತ್ ರಾಮಮಂದಿರ ಕಟ್ಟಿ ಅದ್ದೂರಿಯಾಗಿ ಉದ್ಘಾಟನೆ ಮಾಡುತ್ತೇವೆ ಅಂತ ಹೇಳಿದ್ದಾರೆ.

ರಾಮ ನಗರದಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಸಂಬಂಧವಾಗಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಅಧಿಕಾರಿಗಳ ಜತೆ ಸಭೆ ನಡೆಸಿರುವ ಸಂಸದ ಡಿ.ಕೆ ಸುರೇಶ್ ಬೃಹತ್ ರಾಮಮಂದಿರ ನಿರ್ಮಾಣಕ್ಕಗಿ ಬೇಕಾಗುವ ಹತ್ತಾರು ಎಕರೆ ಭೂಮಿ ಹುಡುಕಾಟಕ್ಕೆ ಮುಂದಾಗಿದ್ದಾರೆ,‌ ಐತಿಹಾಸಿಕ ಪವಿತ್ರ ಸ್ಥಳ ರಾಮದೇವರ ಬೆಟ್ಟದಲ್ಲಿರುವ ರಾಮಮಂದಿರ ಅಭಿವೃದ್ಧಿ ಪಡಿಸಬೇಕು, ಹಾಗೂ ಬಹುದೊಡ್ಡ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡಲಾಗುತ್ತಿದೆ.

ಈ ಹಿಂದೆಯಿಂದಲೂ ರಾಮದೇವರ ಬೆಟ್ಟದಲ್ಲಿ ರಾಮೋತ್ಸವ ಮಾಡಬೇಕು ಅಂತ ಸ್ಥಳೀಯ ಶಾಸಕ‌ ಇಕ್ಬಾಲ್ ಹುಸೇನ್ ಪ್ಲ್ಯಾನ್ ಮಾಡುವ ಜೊತೆಗೆ ಇನ್ನೊಂದು ಹೆಜ್ಜೆ ಮುಂದು ಹೋಗಿ ಬೃಹತ್ ಮಟ್ಟದ ರಾಮಮಂದರಿ ನಿರ್ಮಾಣ‌ ಮಾಡೋ ವಿಚಾರ ಈಗ ಮುನ್ನೆಲೆಗೆ ಬಂದಿದೆ. ಈ ವಿಷಯಕ್ಕೆ ಕೈ ನಾಯಕರು ಒಕ್ಕೊರಲಿನಿಂದ ದನಿ ಕೂಡಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಒಳ ಮೀಸಲಾತಿ ಅರೆ ನಿರ್ಧಾರ

ಮಾಗಿದ ಹಣ್ಣಲ್ಲ ಮಂತ್ರಕ್ಕೆ ಉದುರಿದ ಹಣ್ಣಲ್ಲ ಗುದ್ದಿ ಗುದ್ದಿ ಮಾಗಿಸಿದ ಹಣ್ಣು ಮತ್ತೆ ಮೈಮರೆತರೆ ಕೈಯಿಂದಲೇ ಮಾಯವಾಗುವ ಹಣ್ಣು ಕೈಗೆ…

3 hours ago

ಓದುಗರ ಪತ್ರ: ಏನಿದು ನಕಲಿ ನ್ಯಾಯಾಲಯ?

ನಕಲಿ ನೋಟುಗಳು, ನಕಲಿ ಆಹಾರ ಪದಾರ್ಥಗಳು, ನಕಲಿ ದಾಖಲೆಗಳು, ನಕಲಿ ಅಧಿಕಾರಿಗಳು, ನಕಲಿ ಪೊಲೀಸರು, ನಕಲಿ ಸುದ್ದಿ ವಾಹಿನಿಗಳು ಅಷ್ಟೇ…

3 hours ago

ಓದುಗರ ಪತ್ರ: ಅಶ್ವಿನಿ ನಾಗೇಂದ್ರರವರಿಗೆ ಅಭಿನಂದನೆಗಳು

ಚನ್ನಪಟ್ಟಣದ ಕಲ್ಪಶ್ರೀ ಪ್ರದರ್ಶನ ಕಲೆಗಳು ಕೇಂದ್ರ ಟ್ರಸ್ಟ್ ವತಿಯಿಂದ ನವಂಬರ್ 5ರ ಸಂಜೆ 5.30ಕ್ಕೆ ಮಲೇಷಿಯಾದ ಕೌಲಾಲಂಪುರದ ಸುಭಾಷ್ ಚಂದ್ರ…

3 hours ago

ನಾಳೆ ಮಧ್ಯಾಹ್ನದ ಬಳಿಕ ತಲಕಾವೇರಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಮಡಿಕೇರಿ: ನಾಳೆ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ ನಡೆಯುವುದರಿಂದ ಮಧ್ಯಾಹ್ನ 2 ಗಂಟೆ ಬಳಿಕ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.…

3 hours ago

ಮೈಸೂರು ಮುಡಾ ಹಗರಣ: ಇಂದು ಸಿಬಿಐ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ನಡೆದಿರುವ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ…

3 hours ago

ಹುಲಿ ಸೆರೆಗೆ ದಸರಾ ಆನೆ ಮಹೇಂದ್ರ ಎಂಟ್ರಿ

ಎಚ್.ಡಿ.ಕೋಟೆ: ಕಳೆದ ಕೆಲ ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿರುವ ಹುಲಿ ಸೆರೆಗೆ ದಸರಾ ಆನೆ ಮಹೇಂದ್ರನನ್ನು ಬಳಸಿಕೊಳ್ಳಲಾಗಿದೆ.…

3 hours ago