ಬೆಂಗಳೂರು: ರಾಜ್ಯಾದ್ಯಂತ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭಿಸಲಾಗಿದ್ದು, ನಿಗದಿತ ಸಮಯದೊಳಗೆ ಸಮೀಕ್ಷೆ ಮುಗಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯಿಂದ ದಾಖಲೆಗಳು ದುರ್ಬಳಕೆಯಾಗಲಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಮೀಕ್ಷೆ ಮೂಲಕ ಸಮುದಾಯಗಳ ಸ್ಥಿತಿಗತಿ ಗೊತ್ತಾಗುತ್ತದೆ. ಸಮೀಕ್ಷೆಯಿಂದ ಇನ್ನೇನು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯ? ಕೇಂದ್ರ ಸರ್ಕಾರ ಕೂಡ ಜಾತಿಗಣತಿ ನಡೆಸುತ್ತಿದೆ. ಇದನ್ನು ಬಿಜೆಪಿಯವರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.





