ಬಾಗಲಕೋಟೆ: ಇಲ್ಲಿನ ರಬಕವಿ ಬನಹಟ್ಟಿಯಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಪರ ಪ್ರಚಾರದ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಘೋಷಿಸಿರುವ ಬರ ಪರಿಹಾರದ ಮೊತ್ತದ ಕುರಿತು ಅಸಮಾಧಾನ ಹೊರಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ಎನ್‌ಡಿಆರ್‌ಎಫ್ ನಿಯಮಾವಳಿ ಪ್ರಕಾರ ರಾಜ್ಯಕ್ಕೆ 18171 ಕೋಟಿ ಬರಪರಿಹಾರ ನೀಡಬೇಕು. ಆದರೆ ಕೇಂದ್ರ ಕೇವಲ 3454 ಕೋಟಿ ಬಿಡುಗಡೆ ಮಾಡಿದೆ. ಬರ ಪರಿಹಾರಕ್ಕಾಗಿ ಈ ಹಣ ಸಾಲದು. ಇದರ ವಿರುದ್ಧ ನಮ್ಮ ಪ್ರತಿಭಟನೆ ನಡೆಯಲಿದೆ. ಭಾನುವಾರ ಬೆಳಗ್ಗೆ ವಿಧಾನಸೌಧದ ಮುಂಭಾಗವಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.