ಬೆಳಗಾವಿ: ಅಪೆಂಡಿಕ್ಸ್ ಇ ನಲ್ಲಿ 4000 ಕೋಟಿ, ಗ್ರಾಮೀಣ ರಸ್ತೆಗೆ 2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪರವಾಗಿರುತ್ತಾರೆ. ಇದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಮಂಗಳವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಪರ್ವ ರಾಜ್ಯದಲ್ಲಿ ನಿರಂತರತೆ ಕಾಯ್ದುಕೊಂಡಿದೆ. ವಿಧಾನಸಭೆ-ಪರಿಷತ್ ನಲ್ಲಿ ಮತ್ತು ಸದನದ ಹೊರಗೆ ನಮ್ಮ ಅಭಿವೃದ್ಧಿಯ ದಾಖಲೆಗಳನ್ನು, ಅಂಕಿ ಅಂಶಗಳನ್ನು ಮನೆ ಮನೆ ತಲುಪಿಸಿ ಎದೆ ಎತ್ತಿ ಮಾತನಾಡಿ ಎಂದು ಕಾಂಗ್ರೆಸ್ ಶಾಸಕರಿಗೆ ಕರೆ ನೀಡಿದರು.
ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದೆ. ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು, ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಹೇಳಿದೆ. ಯಡಿಯೂರಪ್ಪ,ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ವಕ್ಫ್ ಆಸ್ತಿ ತೆರವುಗೊಳಿಸಲು ನೋಟಿಸ್ ಗಳನ್ನು ಕೊಡಲಾಗಿದೆ. ಹೀಗಾಗಿ ಬಿಜೆಪಿಗೆ ಈ ಬಗ್ಗೆ ಮಾತನಾಡುವ ಯಾವ ನೈತಿಕತೆ ಇಲ್ಲ ಎಂದರು.
ಬಿಜೆಪಿ 9 ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ, ಸಮ್ಮಿಶ್ರ ಸರ್ಕಾರದಲ್ಲಿದ್ದಾಗಲೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಕೆಲಸ ಮಾಡಲಿಲ್ಲ. ಪ್ರಾದೇಶಿಕ ತಾರತಮ್ಯ ಹೋಗಲಾಡಿಸಲು ಬಿಜೆಪಿ ಪ್ರಯತ್ನವನ್ನೇ ಮಾಡಲಿಲ್ಲ. ನಂಜುಂಡಪ್ಪ ಅವರ ವರದಿಯ ಪ್ರಕಾರ ಅತ್ಯಂತ ಹಿಂದುಳಿದ ತಾಲ್ಲೂಕುಗಳು ಇರುವುದೇ ಉತ್ತರ ಕರ್ನಾಟಕದಲ್ಲಿ. 176 ರಲ್ಲಿ 116 ತಾಲ್ಲೂಕುಗಳು ಹಿಂದುಳಿದಿವೆ. ಇವುಗಳ ಅಭಿವೃದ್ಧಿಗೆ ವಿಶೇಷ ಅನುದಾನ ಕೊಡಬೇಕು ಅಂತಲೂ ಹೇಳಿದ್ದಾರೆ. ನಂಜುಂಡಪ್ಪ ಅವರ ವರದಿಯ ಅನುಷ್ಠಾನ ಮತ್ತು ಸಾಮಾಜಿಕ, ಆರ್ಥಿಕ ಬದಲಾವಣೆ ಕುರಿತಂತೆ ಅಧ್ಯಯನ ನಡೆಸಿ ವರದಿ ನೀಡಲು ಗೋವಿಂದರಾವ್ ಅವರ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…