ರಾಜ್ಯ

ಎಲ್ಲಾ ಕ್ಷೇತ್ರಗಳಿಗೂ 2000 ಕೋಟಿ ವಿತರಣೆ ಮಾಡುತ್ತೇವೆ: ಸಿ.ಎಂ ಘೋಷಣೆ

ಬೆಳಗಾವಿ: ಅಪೆಂಡಿಕ್ಸ್ ಇ ನಲ್ಲಿ 4000 ಕೋಟಿ, ಗ್ರಾಮೀಣ ರಸ್ತೆಗೆ 2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ‍ ಪರವಾಗಿರುತ್ತಾರೆ. ಇದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಮಂಗಳವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಪರ್ವ ರಾಜ್ಯದಲ್ಲಿ ನಿರಂತರತೆ ಕಾಯ್ದುಕೊಂಡಿದೆ. ವಿಧಾನಸಭೆ-ಪರಿಷತ್ ನಲ್ಲಿ ಮತ್ತು ಸದನದ ಹೊರಗೆ ನಮ್ಮ ಅಭಿವೃದ್ಧಿಯ ದಾಖಲೆಗಳನ್ನು, ಅಂಕಿ ಅಂಶಗಳನ್ನು ಮನೆ ಮನೆ ತಲುಪಿಸಿ ಎದೆ ಎತ್ತಿ ಮಾತನಾಡಿ ಎಂದು ಕಾಂಗ್ರೆಸ್ ಶಾಸಕರಿಗೆ ಕರೆ ನೀಡಿದರು.

ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದೆ. ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು, ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಹೇಳಿದೆ. ಯಡಿಯೂರಪ್ಪ,ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ವಕ್ಫ್ ಆಸ್ತಿ ತೆರವುಗೊಳಿಸಲು ನೋಟಿಸ್ ಗಳನ್ನು ಕೊಡಲಾಗಿದೆ. ಹೀಗಾಗಿ ಬಿಜೆಪಿಗೆ ಈ ಬಗ್ಗೆ ಮಾತನಾಡುವ ಯಾವ ನೈತಿಕತೆ ಇಲ್ಲ ಎಂದರು.

ಬಿಜೆಪಿ 9 ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ, ಸಮ್ಮಿಶ್ರ ಸರ್ಕಾರದಲ್ಲಿದ್ದಾಗಲೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಕೆಲಸ ಮಾಡಲಿಲ್ಲ. ಪ್ರಾದೇಶಿಕ ತಾರತಮ್ಯ ಹೋಗಲಾಡಿಸಲು ಬಿಜೆಪಿ ಪ್ರಯತ್ನವನ್ನೇ ಮಾಡಲಿಲ್ಲ. ನಂಜುಂಡಪ್ಪ ಅವರ ವರದಿಯ ಪ್ರಕಾರ ಅತ್ಯಂತ ಹಿಂದುಳಿದ ತಾಲ್ಲೂಕುಗಳು ಇರುವುದೇ ಉತ್ತರ ಕರ್ನಾಟಕದಲ್ಲಿ. 176 ರಲ್ಲಿ 116 ತಾಲ್ಲೂಕುಗಳು ಹಿಂದುಳಿದಿವೆ. ಇವುಗಳ ಅಭಿವೃದ್ಧಿಗೆ ವಿಶೇಷ ಅನುದಾನ ಕೊಡಬೇಕು ಅಂತಲೂ ಹೇಳಿದ್ದಾರೆ. ನಂಜುಂಡಪ್ಪ ಅವರ ವರದಿಯ ಅನುಷ್ಠಾನ ಮತ್ತು ಸಾಮಾಜಿಕ, ಆರ್ಥಿಕ ಬದಲಾವಣೆ ಕುರಿತಂತೆ ಅಧ್ಯಯನ ನಡೆಸಿ ವರದಿ ನೀಡಲು ಗೋವಿಂದರಾವ್ ಅವರ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

3 hours ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

3 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

3 hours ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

4 hours ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

4 hours ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

4 hours ago