ಬಳ್ಳಾರಿ: ವಕ್ಫ್ ಮಂಡಳಿ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಬಗ್ಗೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿವಾರವಾಗಿ ಪಕ್ಷಾತೀತವಾಗಿ ಎಲ್ಲಾ ಕಡೆ ಹೋರಾಟ ನಡೆಯುತ್ತಿದೆ. ಆದರೆ ನಮ್ಮದು ಯತ್ನಾಳ್ ಬಣ ಎಂದು ಎಲ್ಲರೂ ಕರೆಯುತ್ತಿದ್ದಾರೆ. ಆದರೆ ನಾವು ಯತ್ನಾಳ್ ಬಣವಲ್ಲ. ಇರೋದು ಕೇವಲ ಒಂದೇ ಬಣ, ಅದು ಬಿಜೆಪಿ ಬಣ ಎಂದರು.
ಇನ್ನು ನಾವು ಬಿಜೆಪಿ ಬಣದಿಂದ ಹೋರಾಟ ಮಾಡಿದ ಬಳಿಕ ಎಲ್ಲರೂ ಬಂದರು. ಜೆಸಿಪಿ ಸಮಿತಿ ಬಂತು, ಎಲ್ಲವೂ ಬಂತು. ಆದರೆ ಮಾಧ್ಯಮಗಳಲ್ಲಿ ಕೆಲವುಗಳನ್ನು ಬಿಂಬಿಸಲಾಗುತ್ತಿದೆ ಎಂದು ಬಣ ಬಡಿದಾಟ ಕುರಿತು ಸ್ಪಷ್ಟನೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ವಕ್ಫ್ ಬೋರ್ಡ್ ವಿಚಾರದಲ್ಲಿ ಎರಡನೇ ಹಂತದ ಹೋರಾಟ ಮಾಡುತ್ತೇವೆ. ಜನವರಿ.4ರಂದು ಬಳ್ಳಾರಿಯ ಕಂಪ್ಲಿಯಲ್ಲಿ ಸಮಾವೇಶ ಮಾಡುತ್ತೇವೆ. ಜನವರಿ.6ರಂದು ಕೂಡ ಹೋರಾಟ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.
ಇನ್ನು ವಕ್ಫ್ ವಿಚಾರದಲ್ಲಿ ಹಿಂದು-ಮುಸ್ಲಿಂ ಸಮುದಾಯದವರಿಗೆ ಅನ್ಯಾಯವಾಗಿದೆ. ವಕ್ಫ್ ಕಾಯ್ದೆ ಸಂಪೂರ್ಣವಾಗಿ ತೊಲಗಬೇಕು ಎಂದು ನಾವು ಹೋರಾಟ ಮಾಡುತ್ತೇವೆ. ಪಕ್ಷಾತೀತವಾಗಿ ನಾವು ಹೋರಾಟ ಮಾಡುತ್ತೇವೆ. ಬಿಜೆಪಿ ಕಚೇರಿಗಳಲ್ಲಿ ಮುಂದೆ ನಾವು ಸಭೆಗಳನ್ನು ಸಹ ಮಾಡುತ್ತೇವೆ ಎಂದು ತಿಳಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…