ದಾವಣಗೆರೆ: ನಗರದಲ್ಲಿ ಇಂದು ( ಫೆಬ್ರವರಿ 3 ) ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಜ್ಯ ಮಟ್ಟದ ಸಮ್ಮೇಳನ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆ ಟಿಕೆಟ್ ಹಂಚಿಕೆ ಕುರಿತು ಮಾತನಾಡಿದರು.
ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರನಿಗೆ ಲೋಕಸಭೆ ಟಿಕೆಟ್ ಕೊಡುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರೂ ಒಬ್ಬ ಟಿಕೆಟ್ ಆಕಾಂಕ್ಷಿಯಾಗಿ ಟಿಕೆಟ್ ಕೇಳುತ್ತಾರೆ, ಕೇಳಲಿ ಬಿಡಿ ಎಂದರು. ಲೋಕಸಭೆಗೆ ಕಾಂಗ್ರೆಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಶೀಘ್ರದಲ್ಲಿಯೇ ಟಿಕೆಟ್ ನೀಡಲಾಗುವುದು ಎಂದು ಹೇಳಿದರು.
ಯಾರಿಗೂ ಟಿಕೆಟ್ ಕೇಳಬೇಡಿ ಎಂದು ಹೇಳಲು ಆಗುವುದಿಲ್ಲ. ಅಂತಿಮವಾಗಿ ಆಯಾ ಲೋಕಸಭಾ ಕ್ಷೇತ್ರದಲ್ಲಿ ಬರುವ ಮುಖಂಡರು, ಶಾಸಕರು, ಸಚಿವರು, ಮಾಜಿ ಸಚಿವರು, ಮಾಜಿ ಸಂಸದರು, ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಿ ಟಿಕೆಟ್ ನೀಡಲಾಗುವುದು ಎಂದು ತಿಳಿಸಿದರು.





